Headlines

ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಅನಿಲ್‌ನನ್ನು ‘ಅಕ್ಷತಾ’ ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್​​ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್


ಅನಿಲ್‌ನನ್ನು 'ಅಕ್ಷತಾ' ಮಾಡಿದ್ದ ಮಂಗಳಮುಖಿಯರು: ಮಂಗಳೂರು-ಕೇರಳದಲ್ಲಿ ಸೆಕ್ಸ್ ವರ್ಕ್‌ಗೆ ಬಳಕೆ, ಲಿಂಗ ಬದಲಾವಣೆಗೂ ಸ್ಕೆಚ್

ಮೈಸೂರು, ಏ.12: ಜಿಲ್ಲೆ (ಮೈಸೂರು ಅಪರಾಧ) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್‌ಗೆ ಬಳಸಿಕೊಂಡಿರುವ ವಸ್ತುಕಾರಿ ಆರೋಪ ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಈ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅನಿಲ್ ಕುಮಾರ್‌ಗೆ ಮಂಗಳಮುಖಿ ಅನಿತಾ ಮತ್ತು ತಂಡದ ಪರಿಚಯವಾಗಿತ್ತು. ನಂತರ ಆತನನ್ನು ಬಲವಂತವಾಗಿ ಅಪಹರಿಸಿದ ತಂಡ ಮಂಗಳೂರಿಗೆ ಕರೆದೊಯ್ದಿತ್ತು. ಅಲ್ಲಿ ಆತನಿಗೆ ಬಲವಂತವಾಗಿ ಸೀರೆ, ನೈಟಿ ತೊಡಿಸಿ, ಕಿವಿ ಓಲೆ, ಮೂಗುಬಟ್ಟು ಹಾಕಿ ‘ಅಕ್ಷತಾ’ ಎಂದು ಹೆಸರಿಟ್ಟು ಮಂಗಳಮುಖಿಯಾಗಿ ವೇಷ ಬದಲಿಸಿದ್ದರು ಎಂದು ಆರೋಪಿಸಲಾಗಿದೆ.

ಯುವಕ ಅನಿಲ್‌ನನ್ನು ಬೀದಿಗಳಲ್ಲಿ ಅಂಗಡಿಗಳ ಮುಂದೆ ನಿಲ್ಲಿಸಿ ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ಕಲೆಕ್ಷನ್ ಮಾಡಿ. ಅಷ್ಟೇ ಅಲ್ಲದೆ, ಮಂಗಳೂರು ಮತ್ತು ಕೇರಳದ ವಿವಿಧ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್‌ಗೆ ಬಳಸಲಾಗಿದೆ ಎಂದು ಅನಿಲ್ ದೂರಿನಲ್ಲಿ ಆರೋಪಿಸಿದ್ದಾರೆ. ಆತನ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳಮುಖಿ ಎಂದು ಸರ್ಟಿಫಿಕೇಟ್ ಕೊಡಲಾಗಿದೆ. ಮುಂಬೈಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತವಾಗಿ ಲಿಂಗ ಬದಲಾವಣೆ ಮಾಡಲು ಈ ತಂಡ ಸ್ಕೆಚ್ ಹಾಕಿತ್ತು.

ಇದನ್ನೂ ಓದಿ: ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಆರೋಪಿ ಮುಸ್ತಾಫಾಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್

ನಂತರ ಇದರಿಂದ ನೊಂದು ಇವರ ಕಪಿಮುಷ್ಠಿಯಿಂದ ಹೊರಬರಲು ನಿರ್ಧರಿಸಿದ ಅನಿಲ್, ತಾನು ದುಡಿದ 3 ಲಕ್ಷ ರೂಪಾಯಿ ಕೇಳಿದಾಗ ಅನಿತಾ ಉಲ್ಟಾ ಹೊಡೆದಿದ್ದಾಳೆ. ತನ್ನ ಮನೆಯಿಂದ 5 ಲಕ್ಷ ರೂಪಾಯಿ ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾನೆ ಎಂದು ಸುಳ್ಳು ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಾಳೆ. ಹೇಗೋ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ನಂಜನಗೂಡು ಸೇರಿದ, ಅಲ್ಲಿಗೂ ಮಂಗಳಮುಖಿಯರನ್ನು ಕಳಿಸಿ ದಂಧೆಗೆ ಬರುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅನಿಲ್ ಅಳಲು ತೋಡಿಕೊಂಡಿದ್ದಾರೆ. ಸುಮಾರು ಶೇ. 90ರಷ್ಟು ದೃಷ್ಟಿ ದೋಷ ಹೊಂದಿರುವ ಅನಿಲ್ ಕುಮಾರ್, ನಂಜನಗೂಡು ಪೊಲೀಸರಿಗೆ ಹಾಜರಾದ ಮೈಸೂರಿನ ಲಷ್ಕರ್ ಠಾಣೆಗೆ ದೂರು ನೀಡಿ ನ್ಯಾಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *