ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್


ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು, ಏಪ್ರಿಲ್ 13: ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಲಾಗಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಪ್ರಸ್ತಾವನೆ ಮೆಟ್ಟಿಲೇರಿದ್ದು, ಈ ಕುರಿತು ವಿಚಾರಣೆ ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ರೋಹಿಣಿ ಸಿಂಧೂರಿ ಅವರು ಮೈಸೂರು ಡಿಸಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಹೀಗಿದ್ದರೂ ಇದಕ್ಕೆ ಸಂಬಂಧಿಸಿ ತನಿಖೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಸಂಬಂಧ ದೂರುದಾರ, ವಕೀಲ ರವಿಚಂದ್ರೇಗೌಡ ಎನ್.ಆರ್. ಹೈಕೋರ್ಟ್ ರಿಟ್ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 1ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಭ್ರಷ್ಟಾಚಾರ, ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಹೇಳಿದ್ದಾರೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸಲಾಗಿದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಹೀಗಾಗಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ನಿರ್ದೇಶಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ; ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ

ರೋಹಿಣಿ ಸಿಂಧೂರಿ ಮೇಲಿನ ಆರೋಪ ಏನು?

ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್‌ಗಳನ್ನು ಖರೀದಿಸಲಾಗಿದೆ. ಚಿಲ್ಲರೆ 10 ರಿಂದ 13 ರೂಪಾಯಿಗೆ ಸಿಗುವ ಬ್ಯಾಗ್‌ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದಾರೆ. ಹೀಗಾಗಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿದೆ ಎಂದು ಜೆಡಿಎಸ್ ನಾಯಕ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *