ಬಿಸಿಲಿನ ತಾಪಕ್ಕೆ ಬೆಂದ ಕರುನಾಡು: ಈ ಜಿಲ್ಲೆಗಳಲ್ಲಿ ಸಂಜೆ ಮಳೆ ಸಂಭವ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?

ಬಿಸಿಲಿನ ತಾಪಕ್ಕೆ ಬೆಂದ ಕರುನಾಡು: ಈ ಜಿಲ್ಲೆಗಳಲ್ಲಿ ಸಂಜೆ ಮಳೆ ಸಂಭವ; ಹವಾಮಾನ ಇಲಾಖೆ ನೀಡಿದ ಎಚ್ಚರಿಕೆ ಏನು?


ಬೆಂಗಳೂರು, ಏ.14: ಇಂದು (ಏ.14) ಬೆಂಗಳೂರು ಸೇರಿದಂತೆ ಹಲವು ಕಡೆ ಬಿಸಿಲಿನ ಶಾಖ ಹೆಚ್ಚಾಗಲಿದೆ. ಈ ಬಗ್ಗೆ ಹವಾಮಾನ ವರದಿ ಮಾಹಿತಿ ನೀಡಿದೆ. ರಾಜಧಾನಿಯಲ್ಲಿ ಇಂದು ಗರಿಷ್ಠ ತಾಪಮಾನ 35°C ರಿಂದ 37°C ಆಸುಪಾಸಿನಲ್ಲಿ ಇರಲಿದೆ. ಬೆಳಿಗ್ಗೆಯಿಂದ ಬಿಸಿಲ ಧಗೆ ಇರಲಿದೆ, ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿದೆ ಎಂದು ಹೇಳಲಾಗಿದೆ.

ಇನ್ನು ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ತಾಪಮಾನದ ಜೊತೆಗೆ ಹೆಚ್ಚಿರಲಿದ್ದು, ಸೆಖೆಯ ಅನುಭವ ಜಾಸ್ತಿ ಇರಲಿದೆ. ಗರಿಷ್ಠ ತಾಪಮಾನ 34°C ದಾಖಲಾಗುವ ಸಾಧ್ಯತೆ ಇದೆ. ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ. ಇಲ್ಲಿ ತಾಪಮಾನವು 40°C ದಾಟುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಾದ ಕೊಡಗು, ಚಾಮರಾಜನಗರ ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ನಗರ ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ ಸ್ಥಿತಿ
ಬೆಂಗಳೂರು 36°C 22°C ಶುಭ್ರ ಆಕಾಶ / ಸಂಜೆ ಮೋಡ
ಮೈಸೂರು 37°C 21°C ಸಾಧಾರಣ ಮೋಡ
ಮಂಗಳೂರು 34°C 26°C ಸೆಖೆ ಮತ್ತು ಆರ್ದ್ರತೆ
ಕಲಬುರಗಿ 41°C 25°C ತೀವ್ರ ಬಿಸಿಲು
ಹುಬ್ಬಳ್ಳಿ-ಧಾರವಾಡ 38°C 23°C ಬಿಸಿಲು

ಹೊರಗೆ ಹೋಗುವವರು ಹೆಚ್ಚಿನ ಪ್ರಮಾಣದಲ್ಲಿ ನೀರು, ಎಳನೀರು ಅಥವಾ ಮಜ್ಜಿಗೆ ಸೇವಿಸಿ. ಮಧ್ಯಾಹ್ನ 12:00 ರಿಂದ 4:00 ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ತಜ್ಞರು ಹೇಳಿದ್ದಾರೆ. ಬಿಸಿಲಿನ ತಾಪ ಹೆಚ್ಚಿರುವ ಎಣ್ಣೆ ಪದಾರ್ಥದಿಂದ ತಂಪು ಪಾನೀಯ ಹಾಗೂ ಹಣ್ಣುಗಳಿಗೆ ಆದ್ಯತೆ ನೀಡಿ ಎಂದು ಹೇಳಿದ್ದಾರೆ. ಕೊಡಗಿನಲ್ಲಿ ಇಂದು ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ 21°C ಇರಲಿದೆ. ಹಗಲಿನಲ್ಲಿ ಶುಭ್ರ ಸೂರ್ಯನ ಪ್ರಕಾಶವಿರಲಿದೆ, ರಾತ್ರಿ ವೇಳೆ ಮೋಡ ಕವಿದ ವಾತಾವರಣದೊಂದಿಗೆ ಶೇ. 20ರಷ್ಟು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ

ಮೈಸೂರಿನಲ್ಲಿ ಬಿಸಿಲಿನ ತಾಪ ಹೆಚ್ಚಿರಲಿ, ಗರಿಷ್ಠ ತಾಪಮಾನ 36°C ದಾಖಲಾಗಿದೆ. ದಿನವಿಡೀ ಬಿಸಿಲಿದ್ದರೂ ಸಂಜೆ ವೇಳೆಗೆ ಸ್ವಲ್ಪ ಮೋಡ ಕವಿಯುವ ನಿರೀಕ್ಷೆಯಿದೆ. ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 33°C ಇರಲಿದೆ, ಹವಾಮಾನವು ಸಾಮಾನ್ಯವಾಗಿ ಶುಭ್ರವಾಗಿರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮೋಡಗಳಿರಬಹುದು. ಇನ್ನು ಉತ್ತರ ಕರ್ನಾಟಕದಲ್ಲಿ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಕಲಬುರಗಿ ಮತ್ತು ಬಾಗಲಕೋಟೆ ಭಾಗಗಳಲ್ಲಿ ಗರಿಷ್ಠ ತಾಪಮಾನ 41°C ದಾಟುವ ಮೂಲಕ ಬಿಸಿಗಾಳಿಯ ಪ್ರಭಾವ ಇರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 6:18 am, ಮಂಗಳವಾರ, 14 ಏಪ್ರಿಲ್ 26



Source link

Leave a Reply

Your email address will not be published. Required fields are marked *