ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ

ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ


ಕೊಪ್ಪಳ, ಏ.14: ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಮುಸ್ತಫಾ ಖಾದ್ರಿ ಎಂಬಾತನ ಲವ್ ಜಿಹಾದ್ ಆರೋಪ ಪ್ರಕರಣ ಈಗ ಹೊಸ ತಿರುವು ಪಡೆದಿದೆ. ಆರೋಪಿಯ ಮೊಬೈಲ್‌ನಲ್ಲಿ ಸಾವಿರಾರು ಅಶ್ಲೀಲ ವೀಡಿಯೋಗಳು ಮತ್ತು ಅಕ್ರಮಗಳ ಸಾಕ್ಷ್ಯಗಳ ಹೊರತಾಗಿಯೂ ಆತನನ್ನು ಬಂಧಿಸಲು ಭಯಪಡುತ್ತಿರುವ ಸಾರ್ವಜನಿಕರಲ್ಲಿ ಮತ್ತು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ.

ಬಂಧಿತನಾಗದ ಆರೋಪಿ ಮುಸ್ತಫಾ ಖಾದ್ರಿಯ ಮೊಬೈಲ್‌ನಲ್ಲಿ ಸುಮಾರು 9,000ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಮತ್ತು 7,000ಕ್ಕೂ ಅಧಿಕ ಫೋಟೋಗಳು ಇವೆ ಎಂದು ಹೇಳಲಾಗಿದೆ. ಇದಲ್ಲದೆ, ಈ ರಾಜಾರೋಷವಾಗಿ ಹುಕ್ಕಾ ಮತ್ತು ಗಾಂಜಾ ಸೇವಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ, ಪೊಲೀಸರು ಕೇವಲ ನೋಟಿಸ್ ನೀಡಿ ವಿಚಾರಣೆ ನಡೆಸುತ್ತೇವೆ ಎಂದು ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಮುಖಂಡ ಬಸವರಾಜ್, “ಈ ಲವ್ ಜಿಹಾದ್ ಪ್ರಕರಣದ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡವಿದೆ. ಇಷ್ಟೊಂದು ಸಾಕ್ಷ್ಯಗಳಿದ್ದರೂ ಕ್ರಮ ಕೈಗೊಳ್ಳದ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನ, 6 ವರ್ಷದ ಮಗನನ್ನು ಕೊಂದು ಶವವ ನದಿಗೆಸೆದ ತಂದೆ

ದೂರು ದಾಖಲಾಗಿರುವುದು ಎರಡು ದಿನಗಳಾದರೂ ಬಂಧನವಾಗದಿರುವುದು ಪ್ರಕರಣಕ್ಕೆ ಮತ್ತಷ್ಟು ಘನತೆ ತಂದಿದೆ. ಈ ಪ್ರಕರಣವನ್ನು ಹಳ್ಳ ಹಿಡಿಸಲಾಗುತ್ತಿದೆ ಅಥವಾ ಪ್ರಭಾವಿಗಳ ಒತ್ತಡಕ್ಕೆ ಮಣಿದಿದ್ದಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *