![]()
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ, ನಾಳೆ ಪ್ರಮಾಣವಚನ, ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿಗೆ ಸಿಎಂ ಪಟ್ಟ ಒಲಿದಿದೆ.
ಪಾಟ್ನಾ (ಏ.14) ನಿತೀಶ್ ಕುಮಾರ್ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಇದೀಗ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಸರ್ವಾನುತಮತದಿಂದ ಆಯ್ಕೆಯಾಗಿದ್ದಾರೆ. ಬಿಹಾರ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನಿತೀಶ್ ಕುಮಾರ್ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ನಾಲ್ಕು ಗಂಟೆಗೆ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಸರ್ವಾನುಮತದಿಂದ ಸಾಮ್ರಾಟ್ ಚೌಧರಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ನಾಳೆ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.