
ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದ್ದಾರೆ. ಈ ಭೀಕರ ಅಪಘಾತದ ಪರಿಣಾಮವಾಗಿ ಇಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾದ ಹಾಶಿಮ್ ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ