Headlines

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ

ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ


ದಾವಣಗೆರೆ, (ಏಪ್ರಿಲ್ 14): ದಾವಣಗೆರೆ ದಂಗಲ್ ತೀವ್ರ ಸ್ವರೂಪ ಸೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ ಕಾಂಗ್ರೆಸ್ ಮುಸ್ಲಿಂ ನಾಯಕರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಪರಿಷತ್ ಸದಸ್ಯ ಜಬ್ಬರ್ ಅವರಿಂದ ರಾಜೀನಾಮೆ ನೀಡಿದ್ದಾರೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನ ಸಹ ತಲೆದಂಡ ಮಾಡಲಾಗಿದೆ. ಇದೀಗ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ಕುತ್ತು ಬಂದಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ರಹಸ್ಯ ಮಾತುಕತೆ ನಡೆಸಿದ್ದು, ಯಾವಾಗ ತಲೆದಂಡವಾಗುತ್ತೋ ಗೊತ್ತಿಲ್ಲ.

ಈ ಬೆಳವಣಿಗೆಗಳ ನಡುವೆ ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾತನಾಡಿ, ಜಮೀರ್‌ಗೂ ಇದೇ ಪರಿಸ್ಥಿತಿ. ಇವತ್ತು ರಾತ್ರಿಯೇ ತಲೆದಂಡವಾಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಇನ್ನು ಇದೇ ವೇಳೆ ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ, ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



Source link

Leave a Reply

Your email address will not be published. Required fields are marked *