
ಇದೇ ವೇಳೆ, ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ಕ್ಸಿನ್ಹುವಾ ಪ್ರಕಾರ, ಅಧ್ಯಕ್ಷ ಕ್ಸಿ ಜಿನ್ಪಿಂಗ್ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ನಾಲ್ಕು ಅಂಶಗಳ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಶಾಂತಿಯುತ ಸಹಬಾಳ್ವೆ, ದೇಶಗಳ ಸಾರ್ವಭೌಮತ್ವಕ್ಕೆ ಗೌರವ, ಅಂತರರಾಷ್ಟ್ರೀಯ ಕಾನೂನು ಪಾಲನೆ ಹಾಗೂ ಅಭಿವೃದ್ಧಿ ಮತ್ತು ಭದ್ರತೆಯ ನಡುವೆ ಸಮನ್ವಯ ಕಾಪಾಡುವುದು ಈ ಪ್ರಸ್ತಾಪಗಳಲ್ಲಿ ಸೇರಿವೆ.
ಬೀಜಿಂಗ್ನಲ್ಲಿ ಯುಎಇಯ ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗಿನ ಸಭೆಯಲ್ಲಿ ಕ್ಸಿ ಈ ಪ್ರಸ್ತಾಪದ ಬಗ್ಗೆ ಮಾತನಾಡಿದರು.