ಶಿವಮೊಗ್ಗ, (ಏಪ್ರಿಲ್ 14): ಶಿವಮೊಗ್ಗದ ತಾವರೆಕೊಪ್ಪ ಸಫಾರಿಯಲ್ಲಿ (ತ್ಯಾವರೆಕೊಪ್ಪ ಸಫಾರಿ) ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಬಲಿ ಪಡೆದಿದ್ದ ಹಂಸಿನಿ ಎಂಬ ನೀರಾನೆ ಸಾವನ್ನಪ್ಪಿದ್ದಾಳೆ. ಮಾರ್ಚ್ 19 ರಂದು ವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ಹಂಸಿನಿ ನೀರಾನೆ ದಾಳಿ ನಡೆಸಿ ಕೊಂದಿತ್ತು. ಇದಾದ ಬಳಿಕ ಹಂಸಿಣಿಯ ಗರ್ಭದಲ್ಲಿದ್ದ ಮರಿ ಸಾವನ್ನಪ್ಪಿತ್ತು. ಇದೀಗ ತಾಯಿ ಹಂಸಿನಿ ಸಹ ಮೃತ ಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿದ್ದ 12 ವರ್ಷದ ಹಂಸಿನಿ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಇಂದು (ಏಪ್ರಿಲ್ 14) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದೆ.
ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣವಾದ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಪಶುವೈದ್ಯೆ ಸಮೀಕ್ಷಾ ರೆಡ್ಡಿಯನ್ನು ಹಂಸಿನಿ ಬಲಿ ಪಡೆದಿತ್ತು. ಇದಾದ ಬಳಿಕ ಹಂಸಿನಿಯ ಗರ್ಭದಲ್ಲೇ ಮರಿ ಸಾವನ್ನಪ್ಪಿತ್ತು. ಹೊಟ್ಟೆಯಲ್ಲೇ ಮರಿ ಸೋಂಕು ತಗುಲಿ ಹಂಸಿನಿ ಅನಾರೋಗ್ಯಕ್ಕೀಡಾಗಿದ್ದರೆ, ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮಧ್ಯಾಹ್ನ 3:08ಕ್ಕೆ ಹಂಸಿನಿ ಸಂಸ್ಥೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷನರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಒತ್ತಡಕ್ಕೆ ಬಲಿಯಾಯಿತೇ ಮರಿ?: ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆಯ ಮರಿಯಳು ಗರ್ಭದಲ್ಲೇ ಸಾವು!
ಹಂಸಿನಿಯ ಜೀವನದ ನೋವಿನ ಕಥೆ
12 ವರ್ಷದ ಈ ಹಂಸಿನಿ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಆ ಎರಡೂ ಮರಿಗಳು ಹುಟ್ಟಿದ ಕೆಲವೇ ದಿನಗಳಲ್ಲಿ ಸಾವನ್ನಪ್ಪಿದ್ದವು. ಈ ಬಾರಿ ಹಂಸಿನಿ ಮೂರನೇ ಬಾರಿಗೆ ಗರ್ಭ ಧರಿಸಿದ್ದಳು. ಹೀಗಾಗಿ ಈ ಬಾರಿ ಮೃಗಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಸಿನಿ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದರು. ಆದರೂ ಸಹ ಈ ಬಾರಿಯೂ ಮರಿ ಕಣ್ಣು ಬಿಡುವ ಮೊದಲೇ ಗರ್ಭದಲ್ಲಿ ಸಾವನ್ನಪ್ಪಿತ್ತು. ಇದೀಗ ಕೊನೆಗೆ ತಾಯಿ ಹಂಸಿನಿ ಸಹ ಆಯ್ಕೆಯಾಗಿದ್ದಾರೆ.
ಪಶುವೈದ್ಯೆಯ ಬಳಿ ಪಡೆದಿದ್ದ ಹಂಸಿನಿ
ಇದೆ ನೀರಾನೆ ಹಂಸಿನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರನ್ನ ಬಲಿಪಡೆದಿತ್ತು. ಮಾರ್ಚ್ 19 ರಂದು ಮಧ್ಯರಾತ್ರಿ ಹಂಸಿಣಿಗೆ ಚಿಕಿತ್ಸೆ ನೀಡುವಾಗ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಮೇಲೆ ದಾಳಿ ಮಾಡಿತ್ತು. ಈ ಭೀಕರ ದಾಳಿಯಲ್ಲಿ ಡಾ. ಸಮೀಕ್ಷಾ ಅವರು ಸ್ಥಳದಲ್ಲೇ ಇದ್ದರು. ಈ ಘಟನೆಯ ನಂತರ ಅದೇನಾಯ್ತೋ ಏನೋ ಹಂಸಿನಿಯ ಗರ್ಭದಲ್ಲೇ ಮರಿ ಸಾವನ್ನಪ್ಪಿತ್ತು. ಬಳಿಕ ತಾಯಿ ಹಂಸಿನಿ ಆರೋಗ್ಯ ಸಹ ಹದಗೆಟ್ಟಿತ್ತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ