ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ!

ಇಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ! ಮಠದ ಸುತ್ತಲೂ ಸೆಕ್ಯೂರಿಟಿ ಹೇಗಿದೆ ನೋಡಿ!


ಮಂಡ್ಯ, ಏಪ್ರಿಲ್ 15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲು ಸಕಲ ಸಿದ್ಧತೆಗಳು ನಡೆದಿವೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಇದು ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿಯಾಗಿದೆ. ಪ್ರಧಾನಿಯ ಸ್ವಾಗತಕ್ಕಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.

ಪ್ರಧಾನಿಗಳ ಭೇಟಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆರು ಎಸ್ಪಿಗಳು, ಎಂಟು ಎಸ್ಪಿಗಳು, 53 ಇನ್ಸ್‌ಪೆಕ್ಟರ್‌ಗಳು, 18 ಡಿವೈಎಸ್‌ಪಿಗಳು ಸೇರಿದಂತೆ ಒಟ್ಟು 1700ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಮಠಕ್ಕೆ ಹೋಗುವ ರಸ್ತೆಗಳನ್ನು ನಿರ್ಬಂಧಿಸಲಾಗಿದೆ, ಎಸ್ಪಿಜಿ ಭದ್ರತೆಯ ಅಡಿಯಲ್ಲಿ ಸಂಪೂರ್ಣ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *