IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ 22ನೇ ವರ್ಷದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಮೂವರು ಅಲಭ್ಯರಾಗಲಿದ್ದಾರೆ. ಅವರೆಂದರೆ…
- ನುವಾನ್ ತುಷಾರ: ಶ್ರೀಲಂಕಾ ವೇಗಿ ನುವಾನ್ ತುಷಾರ ಫಿಟ್ನೆಸ್ ಸಮಸ್ಯೆಯ ಕಾರಣ ಇನ್ನೂ ಆರ್ಸಿಬಿ ತಂಡವನ್ನು ಕೂಡಿಕೊಂಡಿಲ್ಲ.
- ಯಶ್ ದಯಾಳ್: ಆರ್ಸಿಬಿ ವೇಗಿ ಯಶ್ ದಯಾಳ್ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್ ನಿಂದ ಹೊರಗುಳಿದಿದ್ದಾರೆ.
- ಜೋಶ್ ಹೇಝಲ್ವುಡ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬೌಲರ್ ಜೋಶ್ ಹೇಝಲ್ವುಡ್ ಮಂಗಳವಾರ ನಡೆದ ಆರ್ಸಿಬಿ ತಂಡದ ಅಭ್ಯಾಸಕ್ಕೆ ಗೈರುಹಾಜರಾಗಿದ್ದರು. ಹೀಗಾಗಿ ಫಿಟ್ನೆಸ್ ಸಮಸ್ಯೆಯ ಕಾರಣ ಇಂದಿನ ಮ್ಯಾಚ್ನಿಂದಲೂ ಹೇಝಲ್ವುಡ್ ಹೊರಗುಳಿಯಲಿದೆ ಎಂದು ವರದಿಯಾಗಿದೆ.
ಈ ಮೂವರ ಅಲಭ್ಯತೆಯ ನಡುವೆಯೂ ಆರ್ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿದ ಬಳಗವನ್ನೇ ಈ ಮ್ಯಾಚ್‌ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ.
ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೂಡ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಆಡಲಿದ್ದಾರೆ. ಇನ್ನು ಐದನೇ ಕ್ರಮಾಂಕವು ಟಿಮ್ ಡೇವಿಡ್ಗೆ ಫಿಕ್ಸ್.
ಆರನೇ ಕ್ರಮಾಂಕದಲ್ಲಿ ಬಹಿರಂಗ ಕೀಪರ್ ಬ್ಯಾಟರ್ ಆಗಿ ಜಿತೇಶ್ ಶರ್ಮಾ ಕಾಣಿಸಿಕೊಂಡರೆ, ಏಳನೇ ಮತ್ತು ಎಂಟನೇ ಕ್ರಮಾಂಕಗಳಲ್ಲಿ ಕೃನಾಲ್ ಪಾಂಡ್ಯ ಮತ್ತು ರೊಮಾರಿಯೊ ಶೆಫರ್ಡ್ ಬ್ಯಾಟ್ ಬೀಸಲಿದ್ದಾರೆ.
ಇನ್ನು ಬೌಲರ್‌ಗಳಾಗಿ ಭುವನೇಶ್ವರ್ ಕುಮಾರ್, ಜೇಕಬ್ ಡಫಿ ಹಾಗೂ ಸುಯಶ್ ಶರ್ಮಾ ಆಡುವ ಬಳಗದಲ್ಲಿ ಇರಲಿದ್ದಾರೆ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಯುವ ವೇಗಿ ರಾಸಿಖ್ ಸಲಾಂ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲ್ಲವೆನ್ ಈ ಕೆಳಗಿನಂತಿದೆ…
- ವಿರಾಟ್ ಕೊಹ್ಲಿ
- ಫಿಲ್ ಸಾಲ್ಟ್
- ದೇವದತ್ ಪಡಿಕ್ಕಲ್
- ರಜತ್ ಪಾಟಿದಾರ್ (ನಾಯಕ)
- ಟಿಮ್ ಡೇವಿಡ್
- ಜಿತೇಶ್ ಶರ್ಮಾ (ವಿಕೆಟ್ ಕೀಪರ್)
- ಕೃನಾಲ್ ಪಾಂಡ್ಯ
- ರೊಮಾರಿಯೊ ಶೆಫರ್ಡ್
- ಭುವನೇಶ್ವರ್ ಕುಮಾರ್
- ಜೇಕಬ್ ಡಫಿ
- ಸುಯಶ್ ಶರ್ಮಾ
- ರಾಸಿಖ್ ಸಲಾಂ (ಇಂಪ್ಯಾಕ್ಟ್ ಪ್ಲೇಯರ್).
ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಐಪಿಎಲ್ ಪಂದ್ಯ..!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್, ಭುವನೇಶ್ವರ್ ಕುಮಾರ್, ಭುವನೇಶ್ವರ್ ಕುಮಾರ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).
ರಂದು ಪ್ರಕಟಿಸಲಾಗಿದೆ – 8:52 am, ಬುಧವಾರ, 15 ಏಪ್ರಿಲ್ 26