ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲ್ಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ.
ಘಟನೆಯ ವಿವರ
ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೋಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೋಲೆರೊ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲಿಯೇ ಆಯ್ಕೆಯಾಗಿದ್ದಾರೆ, ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಯ್ಕೆಯಾಗಿದ್ದಾರೆ.
ಅಪಘಾತದಲ್ಲಿ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಮಂತ್ರಾಲಯಕ್ಕೆ ಹೋಗುವ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 7:26 am, ಗುರು, 16 ಏಪ್ರಿಲ್ 26