ಸಂಕೇತ ಸಮಾಧಿ ಕೆಡವಿರುವುದುಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಶಿವಮೊಗ್ಗ, ಏಪ್ರಿಲ್ 16: ಜಗಳಬಿಡಿಸಲು ಹೋಗಿ ಅಪ್ರಾಪ್ತರಿಂದ ಭೀಕರವಾಗಿ ಕೊಲೆಯಾದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸಗೊಳಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಂಕೇತ್ ಕೊಲೆ ಕೇಸ್ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿತ್ತು, ಮಾರ್ಚ್ 31 ರಂದು ಸಂಕೇತ್ ಸಮಾಧಿಯನ್ನು ಧ್ವಂಸಗೊಳಿಸಲಾಗಿದೆ. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೊಲೀಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದರು. ಅಂತಿಮವಾಗಿ ತಾಂತ್ರಿಕ ಆಧಾರದ ಮೇಲೆ ಸಮಾಧಿ ಕೆಡವಿದ್ದ ಅಪ್ರಾಪ್ತ ಆರೋಪಿಯನ್ನು ಬಂಧಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನಲೆಯಲ್ಲಿ ಶಿವಮೊಗ್ಗ ಹೊರವಲಯದ ಸೂಳೆಬೈಲು ಸರಕಾರಿ ಆಸ್ಪತ್ರೆಯಲ್ಲಿ ವಿಶೇಷ ತರಗತಿಯನ್ನು ತೆಗೆದುಕೊಳ್ಳಲಾಗಿದೆ. ಕ್ಲಾಸ್ ಮುಗಿಸಿಕೊಂಡು ಮನೆಗೆ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿರೋದನ್ನು ಸಂಕೇತ್ ನೋಡಿದ್ದಾರೆ. ಹೀಗಾಗಿ ಗಿರೀಶ್‌ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ ಹೋಗಿದ್ದ. ಆ ವೇಳೆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದರು. ಇದರ ಸಂಕೇತ್ ಅಲ್ಲಿಯೇ ಕುಸಿದು ಬಿದ್ದಿದ್ದ. ಕೂಡಲೇ ಗಿರೀಶ್ ತನ್ನ ಮನೆಯವರಿಗೆ ಮತ್ತು ಅಕ್ಕಪಕ್ಕದವರಿಗೆ ಗಲಾಟೆ ಬಗ್ಗೆ ಮಾಹಿತಿ ಕೊಟ್ಟಿದ್ದ. ಇದರಿಂದ ಅಕ್ಕಪಕ್ಕದವರು ಅಲ್ಲಿಗೆ ಹೋಗಿ ನೋಡಿದಾಗ ಹಲ್ಲೆಗೊಳಗಾದ ಸಂಕೇತದ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಕೆರೆದುಕೊಂಡು ಹೋಗುವ ಯತ್ನ ನಡೆಸಲಾಗಿದ್ದರೂ ಮಾರ್ಗ ಮಧ್ಯೆಯೇ ಆತ ಪ್ರಾಣ ಬಿಟ್ಟಿದ್ದ. ಫೆ.23ರಂದು ಘಟನೆ ನಡೆದಿತ್ತು.
ಇದನ್ನೂ ಓದಿ: ಕೊಲೆಯಾದ SSLC ವಿದ್ಯಾರ್ಥಿ ಸಂಕೇತ ಸಮಾಧಿ ಧ್ವಂಸಗೊಳಿಸಿದ ಕಿಡಿಗೇಡಿಗಳು; ಪೋಷಕರಿಗೆ ಮತ್ತೆ ಸಂಬಂಧಿಸಿದ
ಮೃತ ಸಂಕೇತ್ನ ಅಂತ್ಯಕ್ರಿಯೆಯನ್ನು ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಿದ್ದ, ಮಗನ ನೆನಪಿಗಾಗಿ ಮಾ.26ರಂದು ಸಮಾಧಿಯನ್ನು ನಿರ್ಮಿಸಿದ್ದರು. ಅದಾಗಿ ದಿನಗಳು ಕಳೆಯುವ ದಿನ ಸಂಕೇತ ಸಮಾಧಿಯನ್ನೂ ಧ್ವಂಸಗೊಳಿಸಲಾಗಿದೆ. ಸಮಾಧಿಯನ್ನು ಕಲ್ಲಿನಿಂದ ಜಜ್ಜಿದ್ದಲ್ಲದೆ, ಗ್ರಾನೈಟ್‌ಗಳನ್ನು ಒಡೆದುಹಾಕಲಾಯಿತು. ಇದರಿಂದ ಬೇಸರ ಮತ್ತು ಆಕ್ರೋಶಗೊಂಡ ಸಂಕೇತ್‌ನ ತುಂಗಾ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆ ತನಿಖೆಗಿಳಿದ ಪೊಲೀಸರು ಕೊನೆಗೂ ಆರೋಪಿ ಬಾಲಕನನ್ನು ಬಂದಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.