ಕಾರವಾರ, ಏಪ್ರಿಲ್ 16): ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಉರಿದಿರುವ ಘಟನೆ ಕನ್ನಡ (ಉತ್ತರ ಕನ್ನಡ) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಲ್ಲಿ ನೋಡುತ್ತಿದ್ದ ಹಾಗೆ ಟ್ಯಾಂಕರ್ ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.