ವಿನಯ್ ಕುಲಕರ್ಣಿ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ

ವಿನಯ್ ಕುಲಕರ್ಣಿ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ  ವರ್ಗಾವಣೆ


ಬೆಂಗಳೂರು, (ಏಪ್ರಿಲ್ 16): ಕರ್ನಾಟಕದ ಜಿಲ್ಲಾ, ಸಿವಿಲ್, ಹಿರಿಯ ಸಿವಿಲ್ ನ್ಯಾಯಾಧೀಶರು ಸೇರಿದಂತೆ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ. ಇನ್ನು ನಿನ್ನೆ (ಏಪ್ರಿಲ್ 15) ಕಾಂಗ್ರೆಸ್ ಶಾಸಕ ಯ್ ಕುಲಕರ್ಣಿ ವಿರುದ್ಧದ ಕೊಲೆ ಪ್ರಕರಣದ ತೀರ್ಪು ನೀಡಿದ ವಿನಯ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರನ್ನೂ ಸಹ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಪ್ರಕರಣ: ಯಾರಿಗೆ ಜೀವಾವಧಿ? ಯಾರಿಗೆ ರಿಯಾಯಿತಿ? ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಫೈನಲ್

ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳ ಶಿಕ್ಷೆ ಪ್ರಮಾಣ ಪ್ರಕಟಿಸುವ ಒಂದು ದಿನ ಮುನ್ನವೇ ಜಡ್ಜ್ ಸಂತೋಷ್ ಗಜಾನ ಭಟ್ ಅವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಗಜಾನನ ಭಟ್ ಅವರೇ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ್ದು, ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ದೋಷಿ ಎಂದು ತೀರ್ಪು ನೀಡಿದ್ದಾರೆ. ಇಂದು (ಏಪ್ರಿಲ್ 16) ಶಿಕ್ಷೆಯ ಬಗ್ಗೆ ವಿಚಾರಣೆ ನಡೆಸಿದ್ದು, ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಇದರ ಮಧ್ಯೆ ಅವರಿಗೆ ವರ್ಗಾವಣೆ ಶಿಕ್ಷೆ, ನಾಳೆ ಅಪರಾಧಿಗಳಿಗೆ ಪ್ರಮಾಣ ಪ್ರಕಟಿಸುತ್ತಾರಾ ಇಲ್ವಾ ಅಂತ ಸಹಜವಾಗಿಯೇ ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಆದರೆ, ಈ ವರ್ಗಾವಣೆಯಲ್ಲಿ ಯಾವುದೇ ಅನುಮಾನಗಳಿಲ್ಲ. ಇದೊಂದು ಸಹಜ ವರ್ಗಾವಣೆ, ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಜಡ್ಜ್‌ಗಳ ವರ್ಗಾವಣೆ ಪ್ರಕ್ರಿಯೆ ನಡೆಯುತ್ತೆ. ಇದು ಸಹಜವಾಗಿಯೇ ಎಲ್ಲಾ ಪ್ರಕರಣಗಳ ಪ್ರಕ್ರಿಯೆಗಳನ್ನು ಹೇಗೆ ನಡೆಸುತ್ತಿದ್ದರೋ ಜೂನ್ 1 ರವರೆಗೂ ಹಾಗೆಯೇ ನಡೆಸಬಹುದು. ಹೀಗಾಗಿ ನಾಳೆ (ಏಪ್ರಿಲ್ 17) ಕೊಲೆ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿ ಅಪರಾಧಿಗಳಿಗೆ ಜಡ್ಜ್ ಸಂತೋಷ್ ಗಜಾನನ ಭಟ್ ಅವರೇ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದಾರೆ.



Source link

Leave a Reply

Your email address will not be published. Required fields are marked *