ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ, ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಮಳೆಯಾಗಿದ್ದು, ಕಾಫಿನಾಡು ಕಂಗಾಲಾಗಿದೆ.

ಚಿಕ್ಕಮಗಳೂರಿನಲ್ಲಿ ನಿನ್ನೆ (ಏ.16) ರಾತ್ರಿ ಸುರಿದ ಭಾರಿ ಮಳೆಗೆ ಜನರು ಕಂಗಾಲಾಗಿದ್ದಾರೆ. ಭಾರಿ ಗಾಳಿ ಮಳೆಗೆ ಹಲವು ಮರಗಳು ಧರೆಗುರುಳಿದೆ. ಮನೆಗಳ ಮೇಲೆ ಮರಗಳು ಬಿದ್ದು ಅನಾಹುತ ಸಂಭವಿಸಿದೆ. ಇತ್ತ ಮರಗಳು ಬಿದ್ದ ಪರಿಣಾಮ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದೆ. ಇದರಿಂದ ಜಿಲ್ಲೆಯ ಹಲೆವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧೆರುಗುರುಳಿದ ಪರಿಮಾಮ, ಮೂಡಿಗೆರೆ ಪಟ್ಟಣ ಬಿಟ್ಟು ಇಡೀ ತಾಲೂಕಿನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನಿನ್ನೆ ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿದ ಪರಿಮಾಮ ವಿದ್ಯುತ್ ಸಂಪರ್ಕ ಮಾತ್ರವಲ್ಲ, ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಹೀಗಾಗಿ ಸ್ಥಳೀಯರು ವಿದ್ಯುತ್ ಕಂಬ, ಮರಗಳನ್ನು ತೆರವುಗೊಳಿಸುತ್ತಿದ್ದಾರೆ. ಹಲವು ರಸ್ತೆಗಳು ಸಂಪರ್ಕ ಕಡಿದುಕೊಂಡಿದೆ. ಮೂಡಿಗೆರೆ ತಾಲೂಕಿನ ಬಣಕಲ್-ಮತ್ತಿಕಟ್ಟೆ ಮಾರ್ಗದಲ್ಲಿ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಬಿ.ಹೊಸಳ್ಳಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಮನೆ ಮೇಲೆ ತೆಂಗಿನ ಮರ ಬಿದ್ದಿದೆ. ಗಾಳಿ-ಮಳೆ-ಸಿಡಿಲಿಗೆ ಗೌರಮ್ಮ ಎಂಬುವರ ಮನೆ ಮೇಲೆ ತೆಂಗಿನಮರ ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಪಯದಿಂದ ಪಾರಾಗಿದ್ದಾರೆ.

ಮನೆ ಮೇಲೆ ಬಿದ್ದ ತೆಂಗಿನಮರ

Source link
ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ