Headlines

ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ! | Horrific Bus Car Collision In Yadagiri Shantapura Cross Many Burnt Alive Gdp

ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ! | Horrific Bus Car Collision In Yadagiri Shantapura Cross Many Burnt Alive Gdp



ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ ಭಯಾನಕ ಅಪಘಾತ: ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ! | Horrific Bus Car Collision In Yadagiri Shantapura Cross Many Burnt Alive Gdp

ಯಾದಗಿರಿ ಜಿಲ್ಲೆಯ ಸುರಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಭಯಾನಕ ಅಪಘಾತದಲ್ಲಿ ಕನಿಷ್ಠ 6 ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಕಾರು ಮತ್ತು ಖಾಸಗಿ ಬಸ್ ನಡುವಿನ ಮುಖಾಮುಖಿ ಡಿಕ್ಕಿಯಿಂದ ಈ ದುರಂತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಅಪಘಾತದ ಭೀಕರತೆ ಎಷ್ಟಿದೆ ಎಂದರೆ ಮೃತರ ತಲೆಬುರುಡೆಗಳು ಕಾರಿನಲ್ಲಿ ಕಾಣಿಸಿದೆ.

ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್

ಪ್ರಾಥಮಿಕ ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಏಸಿ ಬಸ್ ಮತ್ತು ಯಾದಗಿರಿಯಿಂದ ರಾಯಚೂರಿನ ಲಿಂಗಸೂಗೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡು ಸಜೀವ ದಹನಗೊಂಡಿದ್ದಾರೆ. ಕಾರು ಸಂಪೂರ್ಣವಾಗಿ ಕರಕಲಾಗಿದ್ದು, ಅದರಲ್ಲಿದ್ದ 6 ಮಂದಿ ಸ್ಥಳದಲ್ಲೇ ಭಸ್ಮವಾಗಿದ್ದಾರೆ. ಬಸ್‌ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಬಸ್‌ಗೂ ವ್ಯಾಪಿಸಿದ ಬೆಂಕಿ

ಅಪಘಾತದ ಹೊಡೆತಕ್ಕೆ ಬಸ್‌ಗೂ ಬೆಂಕಿ ತಗುಲಿದ್ದು, ಕೆಲ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯರು ಹಾಗೂ ತಕ್ಷಣ ಆಗಮಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಲು ಮುಂದಾದರು. ಆದರೆ ಕಾರು ಅಪ್ಪಚ್ಚಿಯಾಗಿ ಡೋರ್ ಓಪನ್ ಆಗಲೇ ಇಲ್ಲ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಹರಡಿತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿ ನಂದಿಸಿದ ನಂತರ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಆರಂಭಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸುರಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣವನ್ನು ತಿಳಿಯುವ ಕಾರ್ಯ ಮುಂದುವರೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ದುರಂತದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯದಲ್ಲಿ ಮತ್ತೆ ಖಾಸಗಿ ಬಸ್ ಅಪಘಾತದ ಭೀತಿ ಮೂಡಿಸಿದೆ. ರಸ್ತೆ ಸುರಕ್ಷತೆ ಕುರಿತು ಪ್ರಶ್ನೆಗಳು ಮತ್ತೆ ಉದ್ಭವಿಸಿವೆ.



Source link

Leave a Reply

Your email address will not be published. Required fields are marked *