Headlines

ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ

ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ

ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ

ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್‌ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಬೀದರ್: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಈ ಲಾರಿ ಹೋಗುತ್ತಿತ್ತು.

ಬೀದರ್ ನಗರದ ಝರಣಿ ನರಸಿಂಹ ದೇವಸ್ಥಾನದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ನೂರು ಟನ್‌ಗೂ ಅಧಿಕ‌ ಪಡಿತರ ಅಕ್ಕಿ ಇರೋ ಬಗ್ಗೆ ಮಾಹಿತಿ ಇದೆ.

ಕಾರು ಹಾಗೂ ಟಾಟಾ ಮ್ಯಾಜಿಕ್‌ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಅಕ್ಕಿ ತುಂಬಿದ ಈ ಟ್ರಕ್ ತೆಲಂಗಾಣದಿಂದ ಬೀದರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ.

ಬೀದರ್‌ನ ರಿಂಗ್ ರೋಡ್‌ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ 6 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಭಾಗ್ಯದ ಅಕ್ಕಿಯನ್ನ ಅಕ್ರಮವಾಗಿ ಸಾಗಿಸುತ್ತಿದ್ದಿರಬಹುದು ಎಂಬ ಶಂಕೆ ಮೂಡಿದ್ದು, ಅಪಘಾತದ ನಂತರ ಲಾರಿ ಮಗುಚಿ ಬಿದ್ದಿದ್ದರಿಂದ ರಸ್ತೆ ತುಂಬಾ ಅಕ್ಕಿ ಚೆಲ್ಲಿದೆ.

Source link

Leave a Reply

Your email address will not be published. Required fields are marked *