ವಿನಯ್‌ ಕುಲಕರ್ಣಿಗೆ ಜೀವಾವಧಿ: ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು | Bs Yediyurappa Reacts To Vinay Kulkarni Life Sentence Emotional Statement In Chikkamagaluru Gdp

ವಿನಯ್‌ ಕುಲಕರ್ಣಿಗೆ ಜೀವಾವಧಿ: ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು | Bs Yediyurappa Reacts To Vinay Kulkarni Life Sentence Emotional Statement In Chikkamagaluru Gdp



ವಿನಯ್‌ ಕುಲಕರ್ಣಿಗೆ ಜೀವಾವಧಿ: ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು | Bs Yediyurappa Reacts To Vinay Kulkarni Life Sentence Emotional Statement In Chikkamagaluru Gdp

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹಿಂದೆ ತಾನು ಹೇಳಿದ್ದೇ ಇಂದು ಸತ್ಯವಾಗಿದೆ ಎಂದಿದ್ದಾರೆ. 2019ರಲ್ಲಿ ತಾವೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿತ್ತು ಎಂದು ಅವರು ಸ್ಮರಿಸಿಕೊಂಡರು.

ಚಿಕ್ಕಮಗಳೂರು (ಏ.17): ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಆಜಾದ್ ಪಾರ್ಕ್ ವೃತ್ತದಲ್ಲಿ ಮಾತನಾಡಿದ ಅವರು, ಈ ಘಟನೆ ಬಗ್ಗೆ ಏನು ಹೇಳಬೇಕು ಎನ್ನುವುದು ನನಗೆ ತೋಚುತ್ತಿಲ್ಲ. ಆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ. ಈ ರೀತಿಯ ಘಟನೆ ನಡೆಯಬಾರದಿತ್ತು, ಆದರೆ ನಡೆದಿದ್ದು ದುಃಖಕರ. ಅಪರಾಧ ನಡೆದ ಸಂದರ್ಭದಲ್ಲಿ ನಾನು ಹೇಳಬೇಕಿದ್ದನ್ನು ಆಗಲೇ ಹೇಳಿದ್ದೆ. ಇಂದು ನಾನು ಹೇಳಿದ್ದೇ ಸತ್ಯ ಎಂಬಂತೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.

ಬಿಎಸ್‌ವೈಗೆ ಜೈಕಾರ ಹಾಕಲು ಕಾರಣ

2016ರಲ್ಲಿ ಯೋಗೇಶ್ ಗೌಡ ಕೊಲೆ ನಡೆದಾಗ ಇಂದಿನ ಸಿಎಂ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿತ್ತು. ಸಿಬಿಐಗೆ ನೀಡಬೇಕೆಂದು ಯೋಗೇಶ್ ಗೌಡ ಕುಟುಂಬ ಒತ್ತಾಯಿಸಿದ್ರು. ಆದರೆ ಆಗ ಕೇಸ್ ಬಗ್ಗೆ ಯಾವ ಬೆಳವಣಿಗೆಯೂ ನಡೆಯಲಿಲ್ಲ. ಆದರೆ ಮೈತ್ರಿ ಸರ್ಕಾರ ಇದ್ದಾಗ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಈ ಕೇಸ್ ಅನ್ನು 2019ರಲ್ಲಿ ಸಿಬಿಐಗೆ ವಹಿಸಿದರು. ಅಲ್ಲಿಂದ ಈ ಪ್ರಕರಣಕ್ಕೆ ಟರ್ನಿಂಗ್ ಪಾಯಿಂಟ್ ಸಿಕ್ಕಿತು.

ಘೋಷಣೆ ವೇಳೆ ಗೊಂದಲ

ಇದಕ್ಕೂ ಮೊದಲು ಚಿಕ್ಕಮಗಳೂರಿಗೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸುವ ವೇಳೆ ಒಂದು ವಿಚಿತ್ರ ಘಟನೆ ಗಮನಸೆಳೆಯಿತು. ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ವೇಳೆ ಗೊಂದಲ ಉಂಟಾಗಿ, ಕೆಲವರು ತಪ್ಪಾಗಿ ಯಡಿಯೂರಪ್ಪ ವಿರುದ್ಧವೇ ಘೋಷಣೆ ಕೂಗಲು ಮುಂದಾದರು. ವಿನಯ್ ಕುಲಕರ್ಣಿಯನ್ನು ಜೈಲಿಗೆ ಕಳುಹಿಸಿದ ಯಡಿಯೂರಪ್ಪನವರಿಗೆ ಜೈ ಎಂದು ಘೋಷಣೆ ಕೂಗುವ ವೇಳೆ, ಕೆಲವರು ತಪ್ಪಾಗಿ ವಿರೋಧದ ಘೋಷಣೆ ಕೂಗಿದಂತಾಗಿದೆ. ನಂತರ ತಕ್ಷಣವೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕಾರ್ಯಕರ್ತರು ತಮ್ಮ ಘೋಷಣೆಯನ್ನು ನಿಲ್ಲಿಸಿದರು. ಈ ಘಟನೆ ಸ್ಥಳದಲ್ಲಿದ್ದವರ ಗಮನಸೆಳೆಯಿತು.

ಚಿಕ್ಕಮಗಳೂರಿನಲ್ಲಿ ಬಿ.ಎಸ್.ವೈ. ವಾಸ್ತವ್ಯ

ಬಿ.ಎಸ್. ಯಡಿಯೂರಪ್ಪ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದು, ನಾಳೆ ಲಿಂಗಾಯಿತ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೈತ್ರಾದೇವಿ-ಯಡಿಯೂರಪ್ಪ ವೀರಶೈವ ಲಿಂಗಾಯಿತ ಸಮುದಾಯ ಭವನವು ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ ಈ ಭವನ ನಿರ್ಮಾಣವಾಗಿದೆ. ಕಾರ್ಯಕ್ರಮದ ಬಳಿಕ ಅವರು ನಾಳೆ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.



Source link

Leave a Reply

Your email address will not be published. Required fields are marked *