ಬೆಂಗಳೂರು, ಏಪ್ರಿಲ್ 18: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (ಬೆಂಗಳೂರು) ಅನ್ಯಭಾಷಿಕ ಆಟೋ ಮತ್ತು ಕ್ಯಾಬ್ ಚಾಲಕರ ಸಂಖ್ಯೆ ಹೆಚ್ಚುತ್ತಿದೆ, ಭಾಷೆಯ ಸಮಸ್ಯೆಯಿಂದಾಗಿ ಪ್ರಯಾಣಿಕರು ಮತ್ತು ಚಾಲಕರ ನಡುವೆ ನಿತ್ಯ ಗಲಾಟೆಗಳು ವರದಿಯಾಗುತ್ತಿವೆ. ಈ, ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಬಾರದ ಚಾಲಕರ ಚಾಲನಾ ಪರವಾನಗಿ (ಡಿಎಲ್) ರದ್ದುಪಡಿಸುವ ನಿಯಮ ಜಾರಿಗೆ ತರಬೇಕು ಎಂಬ ಬಲವಾದ ಆಗ್ರಹ ಕೇಳಿಬಂದಿದೆ.
ಮಹಾರಾಷ್ಟ್ರದಲ್ಲಿ ಕಟ್ಟುನಿಟ್ಟಿನ ನಿಯಮ
ಮಹಾರಾಷ್ಟ್ರ ಸರ್ಕಾರವು ಮೇ 1 ರ ‘ಮಹಾರಾಷ್ಟ್ರ ದಿನಾಚರಣೆ’ಯ ಅಂಗವಾಗಿ ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಅಲ್ಲಿನ ಸಾರಿಗೆ ಇಲಾಖೆಯು ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ಬಾರದ ಆಟೋ ಮತ್ತು ಕ್ಯಾಬ್ ಚಾಲಕರ ಪರವಾನಗಿಯನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ನಾಡಿನ ತಿಳಿಯದವರಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇದೇ ಮಾದರಿಯನ್ನು ಈಗ ಕರ್ನಾಟಕದ ಖಾಸಗಿ ಸಾರಿಗೆ ಸಂಸ್ಥೆಗಳು ಒತ್ತಾಯಿಸುತ್ತಿವೆ.
ಕನ್ನಡ ಕಡ್ಡಾಯಕ್ಕೆ ಆಗ್ರಹ
ಕನ್ನಡ ಬಾರದ ವಲಸಿಗ ಚಾಲಕರು ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸುವುದು, ತಪ್ಪು ದಾರಿ ತೋರಿಸುವುದು ಮತ್ತು ವ್ಯವಹಾರದಲ್ಲಿ ವಂಚನೆ ಮಾಡುವುದಕ್ಕೆ ಕಡಿವಾಣ ಹಾಕಲು ಈ ಕಾನೂನು ಅನಿವಾರ್ಯ ಎಂದು ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ಪತ್ರ ಬರೆಯಲು ಒಕ್ಕೂಟ ನಿರ್ಧರಿಸಿದೆ. ಪಕ್ಕದ ತಮಿಳುನಾಡಿನಲ್ಲೂ ಚಾಲನಾ ಪರವಾನಗಿ ನವೀಕರಿಸುವಾಗ ಸ್ಥಳೀಯ ಭಾಷೆಯ ಜ್ಞಾನವನ್ನು ಪರೀಕ್ಷಿಸಲಾಗುತ್ತಿದೆ ಎಂಬ ಅಂಶವನ್ನು ಇಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ
ಒಟ್ಟಿನಲ್ಲಿ, ‘ಕನ್ನಡ ಗೊತ್ತಿದ್ದವರಿಗೆ ಮಾತ್ರ ಡ್ರೈವಿಂಗ್ ಲೈಸೆನ್ಸ್’ ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ, ರಾಜ್ಯ ಸರ್ಕಾರ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ