ಕ್ರಿಸ್ಟಲ್ ಎಐ ಕಂಪನಿಯ ಎಂ.ಡಿ ರಾಜೇಶ್ ಕಾಮತ್
ಬೆಂಗಳೂರು, ಏಪ್ರಿಲ್ 18: ಹೆಚ್ಚು ಟ್ರೇಡಿಂಗ್ (ವ್ಯಾಪಾರ) ಕಂಪನಿಯ ಹೆಸರಿನಲ್ಲಿ ಭಾರೀ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಕ್ರಿಸ್ಟಲ್ ಎಐ (ಕ್ರಿಸ್ಟಲ್ ಎಐ)ಎಂಬ ಸಂಸ್ಥೆಯ ಮೂಲಕ ನೂರಾರು ಹೂಡಿಕೆದಾರರಿಂದ ಕೋಟ್ಯಂತ ರೂಪಾಯಿ ಸಂಗ್ರಹಿಸಿದ ಮೋಸ ಎಂಬ ಆರೋಪ ಕೇಳಿಬಂದಿದೆ.
ಹಣ ಡಬಲ್ ಕೊಡುತ್ತೇವೆ ಅಂತಾ ಟೋಪಿ!
ಈ ಪ್ರಕರಣ ಸಂಬಂಧ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕಾಮತ್ ಅವರನ್ನು ಸಿಬಿಐ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೋಬೋಟ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಮೂಲಕ ಹೂಡಿಕೆ ಮಾಡಿದ ಹಣವನ್ನು ಡಬಲ್ ಮಾಡಿಕೊಡಿ ಎಂದು ನಂಬಿಸಿ ಜನರನ್ನು ಬಲೆಗೆ ಬೀಳಿಸಿರವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಕಮಿಷನರ್ ಕಚೇರಿಯಲ್ಲಿ ಸಿಸಿಬಿ ಪೊಲೀಸರ ವಿಚಾರಣೆ ನಡೆಯುತ್ತಿದ್ದು, 5 ರಿಂದ 6 ಕೋಟಿ ಅಧಿಕ ಹಣ ವಂಚನೆ ನಡೆದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ. ಆದರೆ ನಿಜವಾಗಿಯೂ ವಂಚಿಸಿರುವ ಮೊತ್ತ ನೂರಾರು ಕೋಟಿಗಳಿಗೆ ತಲುಪಿರುವ ಶಂಕೆಯನ್ನೂ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಇದನ್ನೂ ಓದಿ KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ! ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ
ಅಂತರರಾಷ್ಟ್ರೀಯ ಮಟ್ಟದಲ್ಲಿ ವಂಚನೆಯ ಜಾಲ
ಅಲ್ಲದೆ ಆರೋಪಿಗಳು ದುಬೈನಲ್ಲಿ ಕಚೇರಿ ತೆರೆಯುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲೂ ವಂಚನೆ ವಿಸ್ತರಿಸಿರುವ ಮಾಹಿತಿ ಲಭ್ಯವಾಗಿದೆ, ರಾಜೇಶ್ ಕಾಮತ್ ಸೇರಿದಂತೆ ಮೂವರು ಆರೋಪಿಗಳು ಸಂಘಟಿತ ಸಂಚು ರೂಪಿಸಿ ಹೂಡಿಕೆದಾರರನ್ನು ಮೋಸಗೊಳಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ