ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ
ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಪುಣೆ) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು.
ಏನಿದು ಘಟನೆ?
ಶುಕ್ರವಾರ ರಾತ್ರಿ 10:25 ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಿಮಾನದ ಅಡಿಭಾಗದ ಚಕ್ರಗಳ ವ್ಯವಸ್ಥೆಯಲ್ಲಿ (ಅಂಡರ್‌ಕ್ಯಾರೇಜ್) ತಾಂತ್ರಿಕ ವೈಫಲ್ಯ ಉಂಟಾದ ಪರಿಣಾಮ ಅದು ರನ್‌ವೇ ಮೇಲೆಯೇ ನಿಂತುಬಿಟ್ಟಿತ್ತು. ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್‌ಗಳು ಸುರಕ್ಷಿತವಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವಾಯುಪಡೆ ಸ್ಪಷ್ಟಪಡಿಸಿದೆ.
ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ ವಾಯುಪಡೆ, ವಿಮಾನದಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಹಾನಿಯಾಗಿಲ್ಲ. ರನ್‌ವೇ ಕಾರ್ಯಾಚರಣೆಗೆ ತರುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿತು. ನಂತರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿ, ಅಗತ್ಯ ಭದ್ರತಾ ಪರಿಶೀಲನೆಗಳ ನಂತರ ರನ್‌ವೇ ಮತ್ತೆ ಕಾರ್ಯಾಚರಣೆಗೆ ಸಿದ್ಧವಾಗಿದೆ ಎಂದು ಘೋಷಿಸಿತು.
ಪುಣೆ ವಿಮಾನ ನಿಲ್ದಾಣವು ದ್ವಂದ್ವ ಬಳಕೆ ವ್ಯವಸ್ಥೆಯಲ್ಲಿದ್ದು, ಲೋಹೆಗಾಂವ್ ವಾಯುಪಡೆ ಕೇಂದ್ರದೊಂದಿಗೆ ನಾಗರಿಕ ವಿಮಾನಗಳೂ ಕಾರ್ಯನಿರ್ವಹಿಸುತ್ತವೆ. ಈ ಘಟನೆ ಸಂಭವಿಸಿದ ತಕ್ಷಣ ಸುರಕ್ಷತಾ ಕ್ರಮವಾಗಿ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರನ್‌ವೇ ಕ್ಲಿಯರ್ ಮಾಡಲು 4 ರಿಂದ 6 ಗಂಟೆಗಳ ಕಾಲ ಹಿಡಿಯಬಹುದು ಎಂದು ಅಧಿಕಾರಿಗಳು ಅಂಡಾಜಿಸಿದ್ದರು.
ವಿಮಾನದ ಮೇಲೆ ಭಾರಿ ಹೊಡೆತ
ಈ ಸಮಯದಲ್ಲಿ ಅನೇಕ ವಿಮಾನಗಳ ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಯಿತು. ಇಂಡಿಗೋ 31 ಆಗಮನ ಮತ್ತು 34 ನಿರ್ಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ, ಏರ್ ಇಂಡಿಯಾ ಮೂರು ಆಗಮನ ಮತ್ತು ಮೂರು ನಿರ್ಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಸ್ಪೈಸ್ ಜೆಟ್ ಮತ್ತು ಆಕಾಶ ವಿಮಾನ ತಲಾ ಎರಡು ಆಗಮನ ಮತ್ತು ಮೂರು ನಿರ್ಗಮನಗಳನ್ನು ರದ್ದುಗೊಳಿಸಿದವು. ಏರ್ ಇಂಡಿಯಾ ಎಕ್ಸ್ ಪರೆಸ್ ಐದು ಆಗಮನ ಮತ್ತು ಐದು ನಿರ್ಗಮನಗಳನ್ನು ರದ್ದುಗೊಳಿಸಲಾಗಿದೆ.
ಪ್ರಯಾಣ ನಿಷೇಧ
ಪುಣೆ ವಿಮಾನ ನಿಲ್ದಾಣದಲ್ಲಿ ರನ್ವೇ ಲಭ್ಯವಿಲ್ಲದ ಕಾರಣ, ಪುಣೆಗೆ ಮತ್ತು ಅಲ್ಲಿಂದ ಹೊರಡುವ ಕೆಲವು ವಿಮಾನಗಳ ಮೇಲೆ ಪರಿಣಾಮ ಬೀರಬಹುದು.
ಇದು ನಿಮ್ಮ ಪ್ರಯಾಣದ ಯೋಜನೆಗಳ ಮೇಲೆ ಪರಿಣಾಮ ಬೀರಬಹುದು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ ಮತ್ತು ಪ್ರತಿ ಹಂತದಲ್ಲೂ ನಿಮ್ಮನ್ನು ಬೆಂಬಲಿಸಲು ನಾವು ಇಲ್ಲಿದ್ದೇವೆ.
• ಮೊದಲು ನಿಮ್ಮ ಫ್ಲೈಟ್ ಸ್ಥಿತಿಯನ್ನು ಪರಿಶೀಲಿಸಲು ನಾವು ಶಿಫಾರಸು ಮಾಡುತ್ತೇವೆ…
— ಇಂಡಿಗೋ (@IndiGo6E) ಏಪ್ರಿಲ್ 17, 2026
ಪ್ರಯಾಣಿಕರ ಅನುಕೂಲಕ್ಕಾಗಿ ಇಂಡಿಗೋ ವಿಮಾನ ಸಂಸ್ಥೆ ಪ್ರಯಾಣ ಸಲಹೆ ಸೂಚನೆ, ವಿಮಾನ ಸ್ಥಿತಿ ಪರಿಶೀಲಿಸಿದ ಬಳಿಕವೇ ವಿಮಾನ ನಿಲ್ದಾಣಕ್ಕೆ ಬರಲು ಮನವಿ ಮಾಡಿದೆ. ಪರ್ಯಾಯ ಬುಕ್ಕಿಂಗ್ ಅಥವಾ ಸಂಪೂರ್ಣ ಹಣ ಮರುಪಾವತಿ ಆಯ್ಕೆಯನ್ನು ಒದಗಿಸುತ್ತದೆ.
ಇದನ್ನೂ ಓದಿ ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ?
ಸಚಿವರ ಭರವಸೆ
ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರ ಪರಿಸ್ಥಿತಿಯನ್ನು ಅವಲೋಕಿಸಿ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ. ಶನಿವಾರ ಬೆಳಗಿನ ಜಾವದ ವೇಳೆಗೆ ಕಾರ್ಯಾಚರಣೆ ಪುನರಾರಂಭಗೊಂಡಿತು ಎಂದು ವಾಯುಪಡೆ ಟ್ವೀಟ್ ಮೂಲಕ ಶನಿವಾರದ ನಂತರ ರನ್ವೇ ಪರೀಕ್ಷೆ ನಡೆಸಿದರು.
ಪ್ರಯಾಣಿಕರಿಗೆ ಸೂಚನೆ
ರದ್ದತಿಯಿಂದ ಸಂಕಷ್ಟಕ್ಕೀಡಾದ ಪ್ರಯಾಣಿಕರಿಗೆ ಇಂಡಿಗೋ ಸಂಸ್ಥೆಯು ‘ಪ್ಲಾನ್ ಬಿ’ ಅಡಿಯಲ್ಲಿ ಪೂರ್ಣ ಹಣ ಮರುಪಾವತಿ ಅಥವಾ ಪರ್ಯಾಯ ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಹವಾಮಾನ ಅಥವಾ ತುರ್ತು ಸಂದರ್ಭಗಳಲ್ಲಿ ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ವಿಮಾನದ ಸ್ಥಿತಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ