Headlines

Heatwave Safety: ಹೆಚ್ಚುತ್ತಿರುವ ಬಿಸಿಲ ಬೇಗೆ; ಆರೋಗ್ಯ ರಕ್ಷಣೆಗೆ ಇಲ್ಲಿವೆ ಸರಳ ಹಾಗೂ ಪರಿಣಾಮಕಾರಿ ಉಪಾಯಗಳು

Heatwave Safety: ಹೆಚ್ಚುತ್ತಿರುವ ಬಿಸಿಲ ಬೇಗೆ; ಆರೋಗ್ಯ ರಕ್ಷಣೆಗೆ ಇಲ್ಲಿವೆ ಸರಳ ಹಾಗೂ ಪರಿಣಾಮಕಾರಿ ಉಪಾಯಗಳು


ದಿನ ಕಳೆದಂತೆ ಸೂರ್ಯನ ಪ್ರಖರತೆ ಏರುತ್ತಲೇ ಇದೆ. “ಇಂದು ಮಳೆ ಬರಬಹುದು, ನಾಳೆ ಬರಬಹುದು” ಎಂಬ ನಿರೀಕ್ಷೆ ಎಲ್ಲರಲ್ಲೂ ಸಹಜ. ಇತ್ತೀಚೆಗೆ ಶಿರಸಿಯಂತಹ ಮಲೆನಾಡಿನ ಭಾಗದಲ್ಲೂ ನೆರಳಿನಲ್ಲೇ ಸುಮಾರು 35°C ತಾಪಮಾನ ದಾಖಲಾಗಿರುವುದು ಬಿಸಿಲಿನ ತೀವ್ರತೆಗೆ ಸಾಕ್ಷಿ. ಹಿಂದಿನ ಕಾಲದಲ್ಲಿ 33°C ದಾಟಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿತ್ತು, ಆದರೆ ಈಗಿನ ಹವಾಮಾನ ಬದಲಾವಣೆ ನಮಗೆ ಹೆಚ್ಚಿನ ಎಚ್ಚರಿಕೆ ನೀಡುತ್ತಿದೆ. ಬಿಸಿಲಿನ ಧಗೆಯಿಂದ ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಸಲು ಇಲ್ಲಿ ಕೆಲವು ಪ್ರಮುಖ ಸಲಹೆಗಳು:

ಹೊರಾಂಗಣ ಕೆಲಸಗಳ ಸಮಯದ ಬಗ್ಗೆ ಇರಲಿ ಗಮನ:

ಸಾಮಾನ್ಯವಾಗಿ ಮಧ್ಯಾಹ್ನ 11:30 ರಿಂದ ಸಂಜೆ 4:00 ರವರೆಗೆ ಬಿಸಿಲಿನ ತೀವ್ರತೆ ಗರಿಷ್ಠ ಇರುತ್ತದೆ. ಸಾಧ್ಯವಾದಷ್ಟು ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ. ಅನಿವಾರ್ಯ ಕೆಲಸಗಳಿದ್ದರೆ ಬೆಳಿಗ್ಗೆ ಅಥವಾ ಸಂಜೆ 4 ಗಂಟೆಯ ನಂತರ ಮುಗಿಸಿಕೊಳ್ಳುವುದು ಒಳಿತು.

ಸರಿಯಾದ ವಿಷಯದ ಆಯ್ಕೆ:

ಬಿಸಿಲಿನಲ್ಲಿ ಹೋಗಲೇಬೇಕಾದ ಸಂದರ್ಭ ಬಂದಾಗ ಹತ್ತಿ ಬಟ್ಟೆ ಟೋಪಿ ಬಳಸಿ. ಇದು ತಲೆಯನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಇದಲ್ಲದೇ ಅಂಪೈರ್ ಕ್ಯಾಪ್ (ಅಂಪೈರ್ ಕ್ಯಾಪ್) ಸಾಮಾನ್ಯ ಪಿ-ಕ್ಯಾಪ್‌ಗಿಂತ ಇದು ಮುಖ ಮತ್ತು ಕುತ್ತಿಗೆಗೆ ಹೆಚ್ಚು ರಕ್ಷಣೆ ನೀಡುತ್ತದೆ. ಬಣ್ಣದ ಬಟ್ಟೆಗಳು ಶಾಖವನ್ನು ಪ್ರಾರಂಭಿಸುತ್ತವೆ. ಆದ್ದರಿಂದ ಬಿಳಿ ಅಥವಾ ತಿಳಿ ಬಣ್ಣದ ಟೋಪಿಗಳನ್ನು ಧರಿಸುವುದು ಹೆಚ್ಚು ಸೂಕ್ತವಲ್ಲ.

ದೇಹದ ಜಲಾಂಶ ನಿರ್ವಹಣೆ:

ಬಿಸಿಲಿನಲ್ಲಿ ದೇಹವು ಬೇಗನೆ ನೀರಿನಾಂಶವನ್ನು ಕಳೆದುಕೊಳ್ಳುತ್ತದೆ. ಸಾಮಾನ್ಯಕ್ಕಿಂತ ಹೆಚ್ಚು ನೀರನ್ನು ಕುಡಿಯಿರಿ. ಬಿಸಿಲಿಗೆ ಹೋಗುವ ಮೊದಲು 1 ಲೀಟರ್ ನೀರಿಗೆ 6 ಚಮಚ ಸಕ್ಕರೆ ಮತ್ತು 1 ಚಮಚ ಉಪ್ಪು ಸೇರಿಸಿ ಕುಡಿಯಲು ಅಭ್ಯಾಸ ಮಾಡಿಕೊಳ್ಳಿ. ಇದು ದೇಹದ ಶಕ್ತಿಯನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮೌತ್ ಕಾಂಡೋಮ್ ಎಂದರೇನು? ಇದು ಓರಲ್ ಕ್ಯಾನ್ಸರ್ ನಿಂದ ರಕ್ಷಣೆ ನೀಡುತ್ತದೆಯೇ?

ಸಾಂಪ್ರದಾಯಿಕ ‘ಲಾವಂಚ’ದ ಮ್ಯಾಜಿಕ್:

ಉತ್ತರ ಕನ್ನಡದಲ್ಲಿ ಜನಪ್ರಿಯವಾಗಿರುವ ಲಾವಂಚ (ಮಡಿವಾಳ ಬೇರು) ಬಿಸಿಲಿಗೆ ಅತ್ಯುತ್ತಮ ಮದ್ದು. ಒಂದು ಅಡಿಕೆಯ ಗಾತ್ರದಷ್ಟು ಲಾವಂಚ ಬೇರನ್ನು ಮಣ್ಣಿಲ್ಲದಂತೆ ಚೆನ್ನಾಗಿ ತೊಳೆದು ಕುಡಿಯುವ ನೀರಿನ ಡ್ರಂಗೆ ಹಾಕಿ. ಒಮ್ಮೆ ಬಳಸಿದ ಬೇರನ್ನು 3-4 ಬಳಸಬಹುದು. ಈ ನೀರು ದೇಹಕ್ಕೆ ನೈಸರ್ಗಿಕ ತಂಪು ನೀಡುವುದಲ್ಲದೆ, ಮನಸ್ಸಿಗೆ ಹಿತವಾದ ಸುಗಂಧವನ್ನೂ ನೀಡುತ್ತದೆ.

ಕೊತ್ತಂಬರಿ (ಧನಿಯಾ) ಪಾನೀಯ:

ಪ್ರವಾಸ ಮಾಡುವವರಿಗೆ ಅಥವಾ ಹೆಚ್ಚು ನೀರು ಕುಡಿಯಲು ಸಾಧ್ಯವಾಗದವರಿಗೆ ಇದು ರಾಮಬಾಣ. 1 ಲೀಟರ್ ನೀರಿಗೆ 20 ಗ್ರಾಂ ಕೊತ್ತಂಬರಿ ಪುಡಿ ಹಾಕಿ 15-20 ನಿಮಿಷ ಕುದಿಸಿ. ನಂತರ 6 ಚಮಚ ಸಕ್ಕರೆ ಮತ್ತು 2 ಚಮಚ ಉಪ್ಪು ಸೇರಿಸಿ.

ಲೇಖನ: ಡಾ. ರವಿಕಿರಣ ಪಟವರ್ಧನ, ಪಟವರ್ಧನ ಆಯುರ್ವೇದ ಕ್ಲಿನಿಕ್, ಶಿರಸಿ (9242122874)

ಆರೋಗ್ಯಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:45 am, ಶನಿ, 18 ಏಪ್ರಿಲ್ 26



Source link

Leave a Reply

Your email address will not be published. Required fields are marked *