
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗೆ ಕಳುಹಿಸಿದ್ದಾರೆ. 74 ವರ್ಷದ ಧನ್ಕರ್ ರಾಜೀನಾಮೆಗೆ ಕಾರಣವೇನು?
ನವದೆಹಲಿ (ಜು.21) ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕಳುಹಿಸಿದ್ದಾರೆ. ಆಗಸ್ಟ್ 11, 2022 ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದ ಜಗದೀಪ್ ಧನ್ಕರ್, ಇನ್ನು ಎರಡು ವರ್ಷ ಅವಧಿ ಇದ್ದರೂ ದಿಢೀರ್ ರಾಜೀನಾಮೆ ನೀಡಿದ್ದಾರೆ. ಆರೋಗ್ಯದ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ಧನ್ಕರ್ ಹೇಳಿದ್ದಾರೆ. 2027ರ ವರೆಗೆ ಧನ್ಕರ್ ಅವಧಿ ಇದ್ದರೂ ಆರೋಗ್ಯದ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದಾರೆ.
ನನ್ನ ಆರೋಗ್ಯ ದೃಷ್ಠಿಯಿಂದ ಹಾಗೂ ವೈದ್ಯರ ಸಲಹೆಯನ್ನು ಗೌರವಿಸುತ್ತಾ ಈ ತಕ್ಷಣದಿಂದಲೇ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಸಂವಿಧಾನದ ಆರ್ಟಿಕಲ್ 67 (ಎ)ಅಡಿಯಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ತಕ್ಷಣದಿಂದಲೇ ರಾಜೀನಾಮೆ ನೀಡುವುದಾಗಿ ಧನ್ಕರ್ ಹೇಳಿದ್ದಾರೆ. ಇದೇ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕ್ಯಾಬಿನೆಟ್ ಸಚಿವರು ಸೇರಿದಂತೆ ಹಲವರು ಸಹಕಾರವನ್ನು ನೆನಪಿಸಿಕೊಂಡಿದ್ದಾರೆ. ವೈದ್ಯಕೀಯ ಕಾರಣಗಳಿಂದ ಧನ್ಕರ್ ರಾಜೀನಾಮೆ ಪತ್ರ ಶೀಘ್ರದಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಲಿದ್ದಾರೆ.