ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು | Rjd Hints At Poll Boycott In Bihar

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು | Rjd Hints At Poll Boycott In Bihar



ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದೆ.

ಪಟನಾ: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಬಿಹಾರದಲ್ಲಿ ಪ್ರಮುಖ ವಿಪಕ್ಷ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಚುನಾವಣೆಯನ್ನು ಬಹಿಷ್ಕರಿಸುವ ಸುಳಿವು ನೀಡಿದೆ. ಆರ್‌ಜೆಡಿ ನಾಯಕ, ವಿಪಕ್ಷ ನಾಯಕ ತೇಜಸ್ವಿ ಯಾದವ್‌ ಮಾತನಾಡಿ, ‘ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕೆಲಸ ಮಾಡುತ್ತಿದೆ. ಹೀಗಾದಲ್ಲಿ ಚುನಾವಣೆಯ ಪಾರದರ್ಶಕತೆ ಎಲ್ಲಿರುತ್ತದೆ’ ಎಂದಿದ್ದಾರೆ.

ಇದೇ ವೇಳೆ ಚುನಾವಣೆ ಬಹಿಷ್ಕರಿಸುವ ಕುರಿತು ಪ್ರಶ್ನೆಗೆ ಉತ್ತರಿಸಿದ ತೇಜಸ್ವಿ, ಈ ಆಯ್ಕೆಯೂ ನಮ್ಮ ಮುಂದಿದೆ. ನಾವು ಮಿತ್ರ ಪಕ್ಷಗಳು, ಜನರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದೇವೆ’ ಎಂದಿದ್ದಾರೆ. ಚುನಾವಣಾ ಆಯೋಗ ಹೇಳಿದೆ.

ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಪರ ವಿರೋಧದ ಚರ್ಚೆ ನಡುವೆಯೇ ಚುನಾವಣಾ ಆಯೋಗ ‘ಮತಪಟ್ಟಿ ಪರಿಷ್ಕರಣೆಯಲ್ಲಿ 18 ಲಕ್ಷ ಮೃತರು, ಕ್ಷೇತ್ರ ಬದಲಾವಣೆ ಮಾಡಿದ 26 ಲಕ್ಷ ಜನರು ಮತ್ತು ಎರಡು ಕ್ಷೇತ್ರಗಳಲ್ಲಿ ಮತದಾನ ಅರ್ಹತೆ ಪಡೆದಿದ್ದ 7 ಲಕ್ಷ ಮಂದಿ ಹೆಸರನ್ನು ಕೈಬಿಡಲಾಗಿದೆ’ ಎಂದಿದೆ

ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ – ಉಭಯ ಸದನಗಳಲ್ಲಿ ಕಲಾಪ  ಬಲಿ

ಸೋಮವಾರದಿಂದ ಆರಂಭವಾಗಿರುವ ಸಂಸತ್‌ ಅಧಿವೇಶನ 2ನೇ ದಿನವೂ ವಿಪಕ್ಷಗಳ ಗದ್ದಲಕ್ಕೆ ಬಲಿಯಾಯಿತು. ಬಿಹಾರದಲ್ಲಿ ನಡೆಯುತ್ತಿರುವ ಮತಪಟ್ಟಿ ಪರಿಷ್ಕರಣೆ ಉಭಯ ಸದನಗಳಲ್ಲಿ ಕಲಾಪವನ್ನು ಬಲಿ ಪಡೆದಿದ್ದರಿಂದ ಅದು ಬುಧವಾರಕ್ಕೆ ಮುಂದೂಡಿಕೆಯಾಯಿತು.

ಸೋಮವಾರ ಆಪರೇಷನ್ ಸಿಂದೂರಕ್ಕೆ ಬಲಿಯಾಗಿದ್ದ ಗದ್ದಲ, ಮಂಗಳವಾರ ಮತಪಟ್ಟಿ ಪರಿಷ್ಕರಣೆ ವಿಚಾರದಿಂದ ಮುಂದೂಡಿಕೆಯಾಯಿತು. ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡದ ವಿಪಕ್ಷ ನಾಯಕರು, ಘೋಷಣಾ ಪತ್ರಗಳನ್ನು ಹಿಡಿದು, ಮತಪಟ್ಟಿ ಪರಿಷ್ಕರಣೆ ನಿಯಮವನ್ನು ವಾಪಸ್‌ ತೆಗೆದುಕೊಳ್ಳುವಂತೆ ಆಗ್ರಹಿಸಿ ಸದನದ ಬಾವಿಗಿಳಿದು ಪ್ರತಿಭಟಿಸಿದರು. ಬಳಿಕ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮುಂದೂಡಿದರು.

ಮಧ್ಯಾಹ್ನ ಕಲಾಪ ಮತ್ತೆ ಆರಂಭವಾದಾಗಲೂ ವಿಪಕ್ಷಗಳು ಪಟ್ಟು ಬಿಡಲಿಲ್ಲ. ಈ ವೇಳೆ ಕೇಂದ್ರ ಸಚಿವ ಕಿರಣ್‌ ರಿಜಿಜು ಕಲಾಪ ನಡೆಸಲು ಅವಕಾಶ ಮಾಡಿಕೊಡದ ವಿಪಕ್ಷಗಳ ನಡೆಗೆ ಆಕ್ಷೇಪಿಸಿದರು. ಅಲ್ಲದೇ ಸರ್ಕಾರ ಆಪರೇಷನ್ ಸಿಂದೂರದ ಕುರಿತು ಚರ್ಚೆಗೆ ಸಮಯ ನಿಗದಿ ಮಾಡಲಿದೆ ಎಂದು ಭರವಸೆ ನೀಡಿದರು.



Source link

Leave a Reply

Your email address will not be published. Required fields are marked *