Headlines

Beef smuggling Kodagu | ಕೊಡಗಿನಲ್ಲಿ ಗೋಮಾಂಸ ಮಾರಾಟ ಪ್ರಕರಣ: ಆರೋಪಿ ಬಂಧನ | Assam Worker Arrested For Illegal Beef Sale In Kodagu Kumbooru Estate

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 15 ಕೆಜಿ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆದಿದೆ.

ಕೊಡಗು (ಜುಲೈ.26): ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಂಬೂರು ಎಸ್ಟೇಟ್‌ನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಲಾಲ್ ಬಿಲ್ (28) ಎಂದು ಗುರುತಿಸಲಾಗಿದೆ. ಮಾದಾಪುರ ಪೊಲೀಸ್ ಉಪಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ತೋಟದಲ್ಲಿ ಗೋಮಾಂಸ ಮಾರಾಟದ ಕುರಿತು ಖಚಿತ ಮಾಹಿತಿ ಪಡೆದು ಪೊಲೀಸರಿಗೆ ತಿಳಿಸಿದ್ದರು. ಈ ಮಾಹಿತಿಯನ್ನಾಧರಿಸಿ, ಮಾದಾಪುರ ಪೊಲೀಸರು ದಾಳಿ ನಡೆಸಿ 15 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೊಡಗಿನ ಭೂಕುಸಿತ, ತಡೆಗೋಡೆಗೆ 50 ಕೋಟಿ ರೂ. ಅನುದಾನ: ಸಚಿವ ಕೃಷ್ಣಬೈರೇಗೌಡ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ಕಾನೂನು ನಿಷೇಧಿಸಿದ್ದರೂ, ಇಂತಹ ಪ್ರಕರಣಗಳು ಪದೇಪದೇ ಕಂಡುಬರುತ್ತಿವೆ. ಈ ಘಟನೆಗೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಭೋಜೇಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದಾಗಿಯೇ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸುತ್ತಿವೆ. ಕಾನೂನಿನ ಕಟ್ಟುನಿಟ್ಟಾದ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

Source link

Leave a Reply

Your email address will not be published. Required fields are marked *