ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಪತ್ತೆ ಪ್ರಕರಣ; ‘ಕರ್ನಾಟಕದಲ್ಲೇ ನಡೆತಿರೋದು ಆತಂಕಕಾರಿ’ : ಗೃಹ ಸಚಿವ | Mysuru Mdma Drug Factory Busted Karnataka Home Minister Reacts In Davanagere Rav

ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಪತ್ತೆ ಪ್ರಕರಣ; ‘ಕರ್ನಾಟಕದಲ್ಲೇ ನಡೆತಿರೋದು ಆತಂಕಕಾರಿ’ : ಗೃಹ ಸಚಿವ | Mysuru Mdma Drug Factory Busted Karnataka Home Minister Reacts In Davanagere Rav



ಮೈಸೂರಿನಲ್ಲಿ ಭಾರೀ ಪ್ರಮಾಣದ MDMA ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾಗಿದ್ದು, ಗೃಹ ಸಚಿವ ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸರಿಂದ ಲಭ್ಯವಾದ ಮಾಹಿತಿಯ ಮೇರೆಗೆ ಈ ದಾಳಿ ನಡೆದಿದ್ದು, ಕರ್ನಾಟಕ ಪೊಲೀಸರು ತನಿಖೆ ನಡೆಸಲಿದ್ದಾರೆ.

ದಾವಣಗೆರೆ (ಜುಲೈ.27): ಮೈಸೂರಿನಲ್ಲಿ ಭಾರೀ ಪ್ರಮಾಣದ MDMA ಡ್ರಗ್ಸ್ ತಯಾರಿಕಾ ಘಟಕವೊಂದು ಪತ್ತೆಯಾಗಿರುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ದಾವಣಗೆರೆಯಲ್ಲಿ ಪ್ರತಿಕ್ರಿಸಿದ್ದು, ಈ ಘಟನೆ ನಮ್ಮ ರಾಜ್ಯದಲ್ಲೇ ನಡೆದಿರೋದು ನಿಜವಾಗಿಯೂ ಆತಂಕಕಾರಿ ಎಂದು ವಿಷಾದವ್ಯಕ್ತಪಡಿಸಿದರು.

ಮುಂಬೈ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ ಸಂದರ್ಭದಲ್ಲಿ ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಮೈಸೂರಿನ ರಿಂಗ್ ರಸ್ತೆಯ ಬಳಿಯ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ. ಕರ್ನಾಟಕ ಪೊಲೀಸರ ಸಹಕಾರದೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದ ಬಗ್ಗೆ ಕರ್ನಾಟಕ ಪೊಲೀಸರು ಸಹ ತನಿಖೆ ನಡೆಸಲಿದ್ದಾರೆ ಎಂದರು.

ಈ ಘಟಕ ಕಳೆದ 20 ದಿನಗಳಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಆದರೆ, ಇದಕ್ಕೂ ಮೊದಲಿನಿಂದಲೂ ಇದು ನಡೆಯುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ. ಡ್ರಗ್ಸ್‌ನ ಸರಬರಾಜು ಎಲ್ಲೆಲ್ಲಿ ನಡೆದಿದೆ, ಇದರ ಹಿಂದಿನ ಜಾಲವನ್ನು ಭೇದಿಸಲು ಕರ್ನಾಟಕ ಪೊಲೀಸರು ಸಂಪೂರ್ಣ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ದಾವಣಗೆರೆ ಸಿಇಎನ್ ಪೊಲೀಸರ ಭರ್ಜರಿ ಬೇಟೆ; ಹೈವೆ ಬಳಿ ನಿಂತು ಡ್ರಗ್ಸ್ ಮಾರುತ್ತಿದ್ದ ಐವರು ಪೆಡ್ಲರ್‌ಗಳ ಬಂಧನ

ಇದೇ ವೇಳೆ ಕರ್ನಾಟಕದಲ್ಲಿ ದಲಿತ ಸಿಎಂ ಕುರಿತು ಶಾಸಕ ದೇವೇಂದ್ರಪ್ಪನವರ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳುತ್ತಾರೆ ಎಂದು ಅಲ್ಲಿಂದ ತೆರಳಿದರು.

ಕರ್ನಾಟಕದಲ್ಲಿ ಮಾದಕ ವಸ್ತುಗಳ ದಂಧೆಯ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ. ಮುಂದಿನ ತನಿಖೆಯಿಂದ ಈ ಪ್ರಕರಣದ ಸಂಪೂರ್ಣ ವಿವರಗಳು ಬಹಿರಂಗವಾಗಲಿವೆ ಎಂದು ನಿರೀಕ್ಷಿಸಲಾಗಿದೆ.



Source link

Leave a Reply

Your email address will not be published. Required fields are marked *