Headlines

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದ ಸಮಿತಿ | Negi Led Committee To Study Western Ghats Retention Capacity

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದ ಸಮಿತಿ | Negi Led Committee To Study Western Ghats Retention Capacity



ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  ಬೆಂಗಳೂರು :  ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಸಮಿತಿ ರಚಿಸಿ, ಆರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪಿಸಿಸಿಎಫ್ ಮುಖ್ಯಸ್ಥರ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳೊಳಗೆ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ತಿಳಿಸಿದರು.

ಶತಮಾನದಷ್ಟು ಹಳೆಯ 368 ವೃಕ್ಷ ರಕ್ಷಣೆ:

ಬೆಂಗಳೂರು ವಸಂತ ನಗರದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ 368 ವಿವಿಧ ಪ್ರಭೇದದ ಬೃಹತ್ ಮರಗಳಿದ್ದು, ಇವುಗಳನ್ನು ಸಂರಕ್ಷಿಸಲು ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಪ್ರಕ್ರಿಯೆ ಆರಂಭಿಸುವಂತೆ ಮತ್ತು ಅಲ್ಲಿಯವರೆಗೆ ಮರ ಕಡಿಯಲು ಅನುಮತಿ ನೀಡದಂತೆ ಅರಣ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ ರಾಜ್, ಎಪಿಸಿಸಿಎಫ್ ಕುಮಾರ್ ಪುಶ್ಕರ್, ಭಾರತೀಯ ವಿಜ್ಞಾನ ಮಂದಿರದ ವಿಜ್ಞಾನಿ ಟಿ. ರಾಮಚಂದ್ರ ಮತ್ತಿತರರು ಪಾಲ್ಗೊಂಡಿದ್ದರು.

  • -ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ನೇಗಿ ನೇತೃತ್ವದ ಸಮಿತಿ
  • ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವ
  • ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳೊಳಗೆ ರಚಿಸಿ, 6 ತಿಂಗಳಲ್ಲಿ ವರದಿ
  • – ಸಮಿತಿ ರಚಿಸಿ 6 ತಿಂಗಳಲ್ಲಿ ವರದಿ ಮಂಡಿಸಿ
  • – ಅಧಿಕಾರಿಗಳಿಗೆ ಅರಣ್ಯ ಸಚಿವ ಖಂಡ್ರೆ ಸೂಚನೆ



Source link

Leave a Reply

Your email address will not be published. Required fields are marked *