
ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಆಯ್ಕೆಗಳು ಯಾವುವು?
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ವಿರುದ್ಧವಾಗಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದಾದ ಅವಕಾಶವಿದೆ. ಹೈಕೋರ್ಟ್ ಈ ತೀರ್ಪಿಗೆ ತಾತ್ಕಾಲಿಕ ತಡೆ ನೀಡಿದರೆ, ಉಳಿದ ಮೂರು ಪ್ರಕರಣಗಳಲ್ಲಿ ಜಾಮೀನಿಗಾಗಿ ಅವರು ಮುಂದಿನ ಕ್ರಮ ಕೈಗೊಳ್ಳಬಹುದು.
ಒಮ್ಮೆ ಹೈಕೋರ್ಟ್ ಕೂಡ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದರೆ, ಆಗ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಮಾರ್ಗ ಮಾತ್ರ ಉಳಿಯುತ್ತದೆ. ಆದರೆ ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿದರೆ, ಆಗ ಅವರು ವಿಧಿಸಲಾದ ಶಿಕ್ಷೆಯನ್ನು ಅನುಭವಿಸಲೇಬೇಕಾಗುತ್ತದೆ.