Headlines

Shivamogga Jail Shocking Inciden | ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ನೇಣು ಬಿಗಿದು ಸಾವಿಗೆ ಶರಣು! | Shivamogga Central Prison Incident Basavaraj Tragic End His Life Rav

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಸವರಾಜ್ ಎಂಬಾತನೇ ಮೃತ ವ್ಯಕ್ತಿ. ಈ ಘಟನೆ ಜೈಲಿನ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಶಿವಮೊಗ್ಗ, (ಆಗಸ್ಟ್.3): ವಿಚಾರಣಾಧೀನ ಖೈದಿಯೊಬ್ಬ ನೇಣುಬಿಗಿದುಕೊಂಂಡ ಘಟನೆ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಶನಿವಾರ ನಡೆದಿದೆ.

ಬಸವರಾಜ್ (38) ಎಂಬ ಖೈದಿ, ಜೈಲಿನ ಶರಾವತಿ ವಾರ್ಡ್‌ನ ಕೊಠಡಿ ಸಂಖ್ಯೆ 42ರಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಈ ಘಟನೆ ಜೈಲಿನ ಭದ್ರತೆ ಮತ್ತು ಖೈದಿಗಳ ಮಾನಸಿಕ ಆರೋಗ್ಯದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಘಟನೆ ಹಿನ್ನೆಲೆ:

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಿವಾಸಿಯಾಗಿದ್ದ ಬಸವರಾಜ್, ಬಳ್ಳಾರಿಯ ಮೈನ್ಸ್‌ನಲ್ಲಿ ಲಾರಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಇವನು ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಜೂನ್ 11, 2025ರಂದು ತನ್ನ ಪತ್ನಿ ಮಂಜುಳಾ (32) ರನ್ನು ಕೊಲೆ ಮಾಡಿದ ಆರೋಪದ ಮೇಲೆ ಜೂನ್ 13ರಂದು ಬಂಧನಕ್ಕೊಳಗಾಗಿ ಕೇಂದ್ರ ಕಾರಾಗೃಹಕ್ಕೆ ಕಳಿಸಲಾಗಿತತು. ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಒಳಗಾಗಿದ್ದ ಬಸವರಾಜ್, ಜೈಲಿನಲ್ಲಿ ತೀವ್ರ ಮಾನಸಿಕ ಒತ್ತಡದಲ್ಲಿದ್ದನೆಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜೈಲು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಶಿವಮೊಗ್ಗದ ಸರ್ಕಾರಿ ಮೆಗನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಜೈಲಿನ ಒಳಗಿನ ಭದ್ರತೆ, ಖೈದಿಗಳ ಮೇಲ್ವಿಚಾರಣೆ ಕೊರತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

Source link

Leave a Reply

Your email address will not be published. Required fields are marked *