Headlines

ರಾಜ್ಯದ ಕೆಲವೆಡೆ ಭಾರಿ ಮಳೆ, ಕೊಡುಗು ಜಿಲ್ಲಾ ಶಾಲಾ ಕಾಲೇಜಿಗೆ ಬುಧವಾರ ರಜೆ | Karnataka Rains Kodagu Declare Holiday For Schools And College On August 6th

ರಾಜ್ಯದ ಕೆಲೆವೆಡೆ ಭಾರಿ ಮಳೆಯಾಗುತ್ತಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ (ಆ.06) ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು (ಆ.05) ಕರ್ನಾಟಕದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಕಳೆದೆರಡು ದಿನ ಬೆಂಗಳೂರಲ್ಲೂ ಉತ್ತಮ ಮಳೆಯಾಗಿತ್ತು. ಚಿತ್ರದುರ್ಗ, ಹುಬ್ಭಳ್ಳಿ ಸೇರಿದಂತೆ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ಆ.06) ಭಾರಿ ಮಳೆಯಾಗಲಿದೆ ಎಂದಿದೆ. ಇತ್ತ ಕೊಡಗು ಜಿಲ್ಲೆಯಲ್ಲಿ ನಾಳೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಾಳೆ (ಆಗಸ್ಟ್ 6) ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಿದ್ದಾರೆ.

ಯಾರಿಗೆಲ್ಲಾ ನಾಳೆ ರಜೆ

ಕೊಡುಗು ಜಿಲ್ಲೆಯಲ್ಲಿ ನಾಳೆ 150 ಮಿಲಿ ಮೀಟರ್‌ಗಿಂತ ಹೆಚ್ಚು ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಹೇಳಿದೆ. ಆರೇಂಜ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುನ್ನಚ್ಚೆರಿಕಾ ಕ್ರಮವಾಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ದೇಶದ ಹಲೆವೆಡೆ ಮಳೆಯಾಗುತ್ತಿದೆ. ಉತ್ತರಖಂಡದಲ್ಲಿ ಮೇಘಸ್ಫೋಟದಲ್ಲಿ ದುರಂತವೇ ಸಂಭವಿಸಿದೆ. ಹವಾಮಾನ ಇಲಾಖೆ ಸೂಚನೆ ಪ್ರಕಾರ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದಿದೆ. ಇತ್ತ ಕರ್ನಾಟಕದ ಹಲವು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಬೆಟ್ಟದ ತಪ್ಪಲು, ನದಿ ಪಾತ್ರ, ಗುಡ್ಡಗಾಡು ಪ್ರದೇಶದಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Source link

Leave a Reply

Your email address will not be published. Required fields are marked *