Headlines

ಆತ್ಮ8ತ್ಯೆ ಮಾಡಿಕೊಂಡ ಗುತ್ತಿಗೆ ನೌಕರ ಪರಿಚಯ ಇಲ್ಲ: ಸಂಸದ ಡಾ.ಕೆ.ಸುಧಾಕರ್‌ | The Deceased Contract Worker Is Unknown Says Dr K Sudhakar Gvd

ಆತ್ಮ8ತ್ಯೆ ಮಾಡಿಕೊಂಡ ಗುತ್ತಿಗೆ ನೌಕರ ಪರಿಚಯ ಇಲ್ಲ: ಸಂಸದ ಡಾ.ಕೆ.ಸುಧಾಕರ್‌ | The Deceased Contract Worker Is Unknown Says Dr K Sudhakar Gvd



ಆತ್ಮ8ತ್ಯೆ ಮಾಡಿಕೊಂಡ ಗುತ್ತಿಗೆ ನೌಕರ ಪರಿಚಯ ಇಲ್ಲ: ಸಂಸದ ಡಾ.ಕೆ.ಸುಧಾಕರ್‌ | The Deceased Contract Worker Is Unknown Says Dr K Sudhakar Gvd

ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ನೇಣು ಬಿಗಿದುಕೊಂಡು ಆತ್ಮ8ತ್ಯೆ ಮಾಡಿಕೊಂಡಿರುವ ಪ್ರಕರಣದ ಬಗ್ಗೆ ನವದೆಹಲಿಯಲ್ಲಿ ಸುಧಾಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿ/ಚಿಕ್ಕಬಳ್ಳಾಪುರ (ಆ.08): ಗುತ್ತಿಗೆ ನೌಕರನ ಆತ್ಮಹ8ಗೂ ತಮಗೂ ಸಂಬಂಧ ಇಲ್ಲ ಎಂದು ಸಂಸದ ಡಾ। ಕೆ.ಸುಧಾಕರ್‌ ಅವರು ಹೇಳಿದ್ದಾರೆ. ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಬು ನೇಣು ಬಿಗಿದುಕೊಂಡು ಆತ್ಮ8ತ್ಯೆ ಮಾಡಿಕೊಂಡಿರುವ ಪ್ರಕರಣದ ಬಗ್ಗೆ ನವದೆಹಲಿಯಲ್ಲಿ ಸುಧಾಕರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಬಾಬು ಎಂಬ ವ್ಯಕ್ತಿ ನನಗೆ ಗೊತ್ತಿಲ್ಲ, ಆತನ ಮುಖವನ್ನೇ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ ಎಂದು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ.

ಆ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ಬಾಬು ಅನ್ನೋ ವ್ಯಕ್ತಿ ಚಿಕ್ಕಬಳ್ಳಾಪುರ ನಿವಾಸಿ ಎಂದು ಗೊತ್ತಾಗಿದೆ. ಆತ್ಮ8ತ್ಯೆಗೆ ಶರಣಾಗಿರುವುದು ಜಿಲ್ಲಾ ಪಂಚಾಯಿತಿ ಆವರಣದಲ್ಲಿ. ಮೊದಲು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತೇನೆ. ನನಗೆ ಈ ಸಾವು ದುಃಖ ತಂದಿದೆ. ನನ್ನ ಸಾರ್ವಜನಿಕ ಜೀವನದಲ್ಲಿ ಈ ಬಾಬು ಅನ್ನೋ ವ್ಯಕ್ತಿಯನ್ನು ಭೇಟಿ ಆಗಿಲ್ಲ. ನಾನು ಎರಡು ಬಾರಿ ಸಚಿವ ಆಗಿದ್ದೇನೆ, ಶಾಸಕ ಆಗಿದ್ದೇನೆ. ಈ ಸಮಯದಲ್ಲಿ ಹಲವರಿಗೆ ಕೆಲಸ ಕೊಡಿಸಿದ್ದೇನೆ, ಆದರೆ ಈ ವ್ಯಕ್ತಿ ನಂಗೆ ಯಾರೂ ಅಂತ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕರು, ಉಸ್ತುವಾರಿ ಸಚಿವರ ರಾಜಕೀಯ: ಬಾಬು ಕುಟುಂಬದವರು ದೂರು ಕೊಡಲು ಠಾಣೆಗೆ ಹೋದಾಗ ಅಲ್ಲಿನ ಪಿಎಸ್‌ಐ ಶರಣಪ್ಪ ಡೆತ್‌ ನೋಟ್ ನಲ್ಲಿರುವಂತೆ ದೂರು ಕೊಡಿ ಎಂದಿದ್ದಾರೆ. ಶಾಸಕರು, ಉಸ್ತುವಾರಿ ಸಚಿವರ ರಾಜಕೀಯ ಇದೆ. ನನ್ನ ಒಳಗೊಂಡಂತೆ ಯಾರೇ ತಪ್ಪಿತಸ್ಥರು ಇದ್ದರೂ ಅವರಿಗೆ ಉಗ್ರ ಶಿಕ್ಷೆಯಾಗಲಿ. ಕಾನೂನು ಏನೇ ಇರಲಿ ತನಿಖೆ ಪಾರದರ್ಶಕವಾಗಿರಲಿ. ಇದು ಮಾಧ್ಯಮದ ಟ್ರಯಲ್ ಆಗೋದು ಬೇಡ. ಸರಿಯಾಗಿ ತನಿಖೆ ಆಗಲಿ ಎಂದು ಒತ್ತಾಯಿಸಿದ್ದಾರೆ.

ಮೃತ ಕುಟುಂಬ ಸದಸ್ಯರನ್ನು ನಾನು ಭೇಟಿ ಆಗುವೆ. ದೆಹಲಿಯಿಂದ ಹೋದಮೇಲೆ ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡುತ್ತೇನೆ. ನನ್ನ ಕೈಲಾದ ಸಹಾಯವನ್ನು ಆ ಕುಟುಂಬಸ್ಥರಿಗೆ ನೀಡುವೆ. ಇದರ ಹಿಂದೆ ರಾಜಕೀಯ ಪಿತೂರಿ ಇದೆ. ಇದು ಜಗತ್ ಜಾಹೀರಾಗಿದೆ. ಕಾಂಗ್ರೆಸ್ ಶಾಸಕರ ಹೆಸರು ಬಂದರೆ ಒಂದು ಕಾನೂನು, ಬಿಜೆಪಿ ಶಾಸಕ, ಸಂಸದರು ಹೆಸರು ಬಂದರೆ ಬೇರೆ ಕಾನೂನು. ಬಾಬು ಸಾವನ್ನು ರಾಜಕೀಯ ಕಾರಣಕ್ಕೆ ಎಳೆದು ತರುವುದು ಸರಿ ಅಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ನಾಗೇಶ್ ಅವರ ಮಾವ ಚಿಕ್ಕಾಡಗನಹಳ್ಳಿ ಕೃಷ್ಣಮೂರ್ತಿ ಪರಿಚಯ ಇದೆ. ಕೊಡಗು ಪ್ರಕರಣದಲ್ಲಿ ಶಾಸಕರು ಹೆಸರು ಯಾಕೆ ಹಾಕಿಲ್ಲ. ಇದರಲ್ಲಿ ರಾಜಕೀಯ ಇರೋದು ಎದ್ದು ಕಾಣುತ್ತಿದೆ. ನಾಗೇಶ್ ಹಾಗೂ ಮಂಜುನಾಥ್ ಎಂಬವವರು, ಕೆಲಸ ಕೊಡಿಸೋದಾಗಿ ಹೇಳಿ ₹15 ಲಕ್ಷ ತಗೊಂಡಿದ್ದಾರೆ ಅಂತ ಮಾಹಿತಿ ಬಂದಿದೆ. ನಾಗೇಶ್ ಅವರ ಮಾವ ಕೃಷ್ಣಮೂರ್ತಿ ನಮ್ಮ ಪಕ್ಷದಲ್ಲಿದ್ದರು. ಈ ಒಂದು ಆತ್ಮ8ತ್ಯೆ ಪ್ರಕರಣವನ್ನು ರಾಜಕೀಯ ಮಾಡೋ ಪ್ರಯತ್ನವನ್ನು ಮಾಡಲಾಗುತ್ತಿದೆ. ದೇಶದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿದೆ. ತನಿಖೆ ಪಾರದರ್ಶಕವಾಗಿ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.



Source link

Leave a Reply

Your email address will not be published. Required fields are marked *