ಬೆಂಗಳೂರು, ಜೂನ್ 27: ಪೊಲೀಸರ ಟೋಪಿಯ ವಿನ್ಯಾಸ ಬದಲಾಯಿಸಲು ಕರ್ನಾಟಕ ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಡಿಜಿಪಿ ಕಚೇರಿಯಲ್ಲಿ ವಿವಿಧ ರಾಜ್ಯಗಳ ಪೊಲೀಸ್ ಕ್ಯಾಪ್ಗಳನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ ಪರಿಶೀಲನೆ ನಡೆಸಿದರು. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗೋವಾ ಕ್ಯಾಪ್ಗಳನ್ನು ಅವರು ವೀಕ್ಷಿಸಿದರು. ಪ್ರಸ್ತಾವಿತ ಕರ್ನಾಟಕ ಪೊಲೀಸ್ ಕ್ಯಾಪ್ ಮಾದರಿ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕ್ಯಾಪ್ ಬದಲಾವಣೆಗೆ ಇಲಾಖೆ ಚಿಂತನೆ ನಡೆಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ