‘ಅನಾಮಿಕ ಯಾರು? ಅವನ ಹಿನ್ನೆಲೆ ಏನು?..’ ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ ಕುಂದುತರಲು ಯತ್ನ; ಸಂಸದ ಕಾಗೇರಿ ಆಕ್ರೋಶ | Dharmasthala Case Mp Vishweshwar Hegde Kageri Outraged

ಧರ್ಮಸ್ಥಳದ ಘನತೆಗೆ ಕುಂದು ತರುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾಮಿಕ ವ್ಯಕ್ತಿಯ ಆರೋಪಗಳ ಹಿಂದಿರುವವರನ್ನು ಬಹಿರಂಗಪಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಕಾರವಾರ, ಉತ್ತರಕನ್ನಡ (ಆ.9): ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ಘನತೆಗೆ ಕುಂದು ತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಪಾರದರ್ಶಕ ಮತ್ತು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ದೆಹಲಿಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದ ಸಂಸದರು, ಮೊದಲು 13 ಸ್ಥಳಗಳ ಬಗ್ಗೆ ಹೇಳಿದ್ದ ಅನಾಮಿಕ ವ್ಯಕ್ತಿ ಈಗ 18 ಸ್ಥಳಗಳ ಬಗ್ಗೆ ಹೇಳುತ್ತಿದ್ದಾನೆ. ಯಾವುದೇ ಮಾಹಿತಿಯಿಲ್ಲದ ವ್ಯಕ್ತಿ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ. ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿ ಯಾರು? ಅವನ ಹಿನ್ನೆಲೆ ಏನು? ಅವನ ಹಿಂದಿರುವವರು ಯಾರು? ಎಲ್ಲಾ ಮಾಹಿತಿಯನ್ನು ಸರ್ಕಾರ, ಎಸ್‌ಐಟಿ ಬಹಿರಂಗಪಡಿಸುವಂತೆ ಆಗ್ರಹಿಸಿದರು.

ಎಸ್‌ಐಟಿ ತನಿಖೆ ಸ್ವಾಗತಾರ್ಹ, ಈ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್‌ಐಟಿಯನ್ನು ಬಳಸಿಕೊಳ್ತಿದೆ. ಎಸ್‌ಐಟಿ ತನಿಖೆಯ ದಿಕ್ಕು ತಪ್ಪುತ್ತಿದೆ ಎಂಬ ಅನುಮಾನವೂ ವ್ಯಕ್ತಪಡಿಸಿದ ಕಾಗೇರಿಯವರು, ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯ ಎಡಪಂಥೀಯ ವಿಚಾರಧಾರೆಯವರ ನಿದ್ದೆಗೆಡಿಸಿವೆ. ಇದರಿಂದಲೇ ಅವರು ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದೂಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಈ ಷಡ್ಯಂತ್ರ ಖಂಡಿಸಬೇಕು ಎಂದು ಕಾಗೇರಿ ಕರೆ ನೀಡಿದರು.

Source link

Leave a Reply

Your email address will not be published. Required fields are marked *