ಏಷ್ಯಾಕಪ್ ಟೂರ್ನಿಗೆ ಭಾರತ ತಂಡ: ಗಿಲ್, ಬುಮ್ರಾ ಬರ್ತಾರಾ? ಯಾರಿಗೆಲ್ಲಾ ಸಿಗುತ್ತೆ ಚಾನ್ಸ್? | India Asia Cup 2025 Squad To Be Announced This Week Kvn

ಏಷ್ಯಾಕಪ್ ಟೂರ್ನಿಗೆ ಭಾರತ ತಂಡ: ಗಿಲ್, ಬುಮ್ರಾ ಬರ್ತಾರಾ? ಯಾರಿಗೆಲ್ಲಾ ಸಿಗುತ್ತೆ ಚಾನ್ಸ್? | India Asia Cup 2025 Squad To Be Announced This Week Kvn



ಏಷ್ಯಾಕಪ್ ಟೂರ್ನಿಗೆ ಭಾರತ ತಂಡ: ಗಿಲ್, ಬುಮ್ರಾ ಬರ್ತಾರಾ? ಯಾರಿಗೆಲ್ಲಾ ಸಿಗುತ್ತೆ ಚಾನ್ಸ್? | India Asia Cup 2025 Squad To Be Announced This Week Kvn

ಮುಂದಿನ ತಿಂಗಳು ಯುಎಇನಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಭಾರತ ತಂಡವನ್ನು ಈ ವಾರ ಘೋಷಿಸಲಾಗುವುದು. ಶುಭ್‌ಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮರಳುವ ಸಾಧ್ಯತೆ ಇದೆ. ಯಶಸ್ವಿ ಜೈಸ್ವಾಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಪರಿಗಣಿಸುವುದಿಲ್ಲ ಎಂದು ವರದಿಯಾಗಿದೆ.

ಮುಂಬೈ: ಮುಂದಿನ ತಿಂಗಳು ಯುಎಇನಲ್ಲಿ ನಡೆಯೋ ಏಷ್ಯಾಕಪ್‌ಗೆ ಇಂಡಿಯನ್ ಕ್ರಿಕೆಟ್ ತಂಡವನ್ನ ಈ ವಾರ ಘೋಷಿಸಲಾಗುತ್ತೆ. ಮುಂಬೈನಲ್ಲಿ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಈ ವಾರ ಸಭೆ ಸೇರಲಿದೆ. ನಂತರ ಪತ್ರಿಕಾಗೋಷ್ಠಿ ನಡೆಸಿ ತಂಡವನ್ನು ಘೋಷಿಸಲಾಗುತ್ತೆ. ಟೆಸ್ಟ್ ತಂಡದ ನಾಯಕ ಶುಭ್‌ಮನ್ ಗಿಲ್ ಟಿ20 ತಂಡಕ್ಕೆ ಮರಳುತ್ತಾರಾ ಅನ್ನೋ ಕುತೂಹಲ ಇದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ತಂಡದಲ್ಲಿ ಗಿಲ್ ಉಪನಾಯಕರಾಗಬಹುದು ಅಂತ ವರದಿಗಳಿವೆ. ಒಂದು ವೇಳೆ ಶುಭ್‌ಮನ್ ಗಿಲ್ ಉಪನಾಯಕರಾದ್ರೆ ಆಲ್ರೌಂಡರ್ ಅಕ್ಷರ್ ಪಟೇಲ್‌ಗೆ ಸ್ಥಾನ ಕಳೆದುಕೊಳ್ಳಬಹುದು.

ಅಭಿಷೇಕ್ ಶರ್ಮ ಜೊತೆ ಶುಭ್‌ಮನ್ ಗಿಲ್ ಓಪನಿಂಗ್ ಮಾಡಿದ್ರೆ ಸಂಜು ಸ್ಯಾಮ್ಸನ್‌ಗೆ ಕಷ್ಟ ಆಗಬಹುದು. ಇಂಗ್ಲೆಂಡ್‌ನಲ್ಲಿ ಟೆಸ್ಟ್ ನಾಯಕನಾಗಿ ಗಿಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತಿ ನೀಡುವುದು ಒಳ್ಳೆಯದು ಅಂತ ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರೀತ್ ಬುಮ್ರಾ ಏಷ್ಯಾಕಪ್‌ನಲ್ಲಿ ಆಡ್ತಾರೆ ಅಂತ ಸುಳಿವು ಸಿಕ್ಕಿದೆ. ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿ ಇರ್ತಾರೆ. ಸಂಜು ವಿಕೆಟ್ ಕೀಪರ್ ಆದ್ರೆ, ಜಿತೇಶ್ ಶರ್ಮ ಅಥವಾ ಧ್ರುವ್ ಜುರೆಲ್ ಇನ್ನೊಬ್ಬ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಬಹುದು.

ಏಷ್ಯಾಕಪ್ ತಂಡಕ್ಕೆ ಓಪನರ್ ಯಶಸ್ವಿ ಜೈಸ್ವಾಲ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರನ್ನು ಪರಿಗಣಿಸೋದಿಲ್ಲ ಅಂತ ವರದಿಯಾಗಿದೆ. ಯಶಸ್ವಿ ಜೈಸ್ವಾಲ್‌ಗೆ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಗಮನಹರಿಸಲು ಆಯ್ಕೆದಾರರು ಸೂಚಿಸಿದ್ದಾರೆ. ಇಂಡಿಯಾ ಪರ 23 ಟಿ20 ಪಂದ್ಯಗಳನ್ನಾಡಿರೋ ಜೈಸ್ವಾಲ್ 723 ರನ್ ಗಳಿಸಿದ್ದಾರೆ. ಐಪಿಎಲ್‌ನ 14 ಪಂದ್ಯಗಳಲ್ಲಿ 559 ರನ್ ಗಳಿಸಿ ಮಿಂಚಿದ್ದರು. ಹೀಗಾಗಿ ಏಷ್ಯಾಕಪ್‌ನಲ್ಲಿ ಸಂಜು ಸ್ಯಾಮ್ಸನ್-ಅಭಿಷೇಕ್ ಶರ್ಮ ಜೋಡಿಗೆ ಭಾರತ ತಂಡ ಮಣೆ ಹಾಕಬಹುದು. ಶುಭ್‌ಮನ್ ಗಿಲ್ ತಂಡಕ್ಕೆ ಬಂದ್ರೆ ಮೂರನೇ ಕ್ರಮಾಂಕ ಅಥವಾ ಓಪನಿಂಗ್‌ನಲ್ಲಿ ಅವಕಾಶ ಸಿಗಬಹುದು.

ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್‌ ನಾಯಕ ಮತ್ತು ಬ್ಯಾಟ್ಸ್‌ಮನ್ ಆಗಿ ಮಿಂಚಿದ್ದ ಶ್ರೇಯಸ್ ಅಯ್ಯರ್ ಟಿ20 ತಂಡಕ್ಕೆ ಮರಳಲು ಇನ್ನೂ ಕೆಲಕಾಲ ಕಾಯಬೇಕಾಗಬಹುದು ಅಂತ ವರದಿಯಾಗಿದೆ. ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನಾಡಲಿದೆ. ಸೆಪ್ಟೆಂಬರ್ 14 ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

2025ರ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದ್ದು, ಪ್ರಶಸ್ತಿಗಾಗಿ ಏಷ್ಯಾದ 8 ಬಲಿಷ್ಠ ತಂಡಗಳು ಕಾದಾಡಲಿವೆ. 8 ತಂಡಗಳನ್ನು ತಲಾ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ‘ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಓಮನ್ ಹಾಗೂ ಯುಎಇ ತಂಡಗಳು ಸ್ಥಾನ ಪಡೆದಿವೆ. ಇನ್ನು ‘ಬಿ’ ಗುಂಪಿನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಕಾಂಗ್ ಹಾಗೂ ಶ್ರೀಲಂಕಾ ತಂಡಗಳು ಸ್ಥಾನ ಪಡೆದಿವೆ.

ಏಷ್ಯಾಕಪ್ ಟೂರ್ನಿಗೆ ಭಾರತದ ಸಂಭಾವ್ಯ ತಂಡ:

ಬ್ಯಾಟರ್‌ಗಳು: ಸೂರ್ಯಕುಮಾರ್ ಯಾದವ್, ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಹಾಗೂ ತಿಲಕ್ ವರ್ಮಾ

ವಿಕೆಟ್ ಕೀಪರ್‌: ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ಆಗಿ ಸ್ಥಾನ ಪಡೆಯಲಿದ್ದು, ಎರಡನೇ ವಿಕೆಟ್ ಕೀಪರ್ ಬ್ಯಾಟರ್‌ ಸ್ಥಾನಕ್ಕೆ ಜಿತೇಶ್ ಶರ್ಮಾ ಹಾಗೂ ಧ್ರುವ್ ಜುರೇಲ್ ನಡುವೆ ಪೈಪೋಟಿ ಏರ್ಪಟ್ಟಿದೆ.

ಆಲ್ರೌಂಡರ್: ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್.

ಬೌಲಿಂಗ್ ವಿಭಾಗ: ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ ಹಾಗೂ ಪ್ರಸಿದ್ದ್ ಕೃಷ್ಣ.



Source link

Leave a Reply

Your email address will not be published. Required fields are marked *