Breaking News: ‘ಬೋರ್ಡು ಇರದ ಬಸ್ಸನು’ ಕಾಂಟಾ ಲಗಾ ಹಾಡಿನಲ್ಲಿ ನೃತ್ಯ ಮಾಡಿದ್ದ ನಟಿ 42ನೇ ವಯಸ್ಸಿಗೆ ಹೃದಯಾಘಾತದಿಂದ ಸಾವು | Actress Shefali Jariwala Of Kanta Laga And Bigg Boss Fame Dies At 42 Of Heart Attack Report Rav

ಬಿಗ್ ಬಾಸ್ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ (42) ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೂನ್ 27 ರಂದು ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬಿಗ್ ಬಾಸ್ 13 ರಲ್ಲಿ ಕಾಣಿಸಿಕೊಂಡಿದ್ದಕ್ಕೆ ಹೆಸರುವಾಸಿಯಾಗಿದ್ದ ನಟಿ ಶೆಫಾಲಿ ಜರಿವಾಲಾ (42) ಅವರು ಜೂನ್ 27 ರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಿಬ್ಬಂದಿ ದೃಡಪಡಿಸಿದೆ.

ವರದಿಗಳ ಪ್ರಕಾರ, ಹೃದಯಾಘಾತಗೊಂಡಿದ್ದ ಶೆಫಾಲಿ ಅವರನ್ನು ಅವರ ಪತಿ ಹಾಗೂ ಇತರ ಮೂವರು ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಕರೆತಂದಿದ್ದರು. ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡಿದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ‘ಶೆಫಾಲಿ ಅವರನ್ನು ಆಸ್ಪತ್ರೆಗೆ ಕರೆತರುವ ಮೊದಲೇ ಅವರು ನಿಧನರಾಗಿದ್ದರು. ಅವರ ಪತಿ ಮತ್ತು ಇತರ ಕೆಲವರು ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ನಂತರ ಶೆಫಾಲಿ ಅವರ ಶವವನ್ನು ಕೂಪರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಪತ್ರಕರ್ತ ವಿಕಿ ಲಾಲ್ವಾನಿ ಈ ಘಟನೆಯ ಕುರಿತು ವಿವರವಾಗಿ ಹಂಚಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *