Chikkamagaluru Shocking incident: ಚಿರತೆ ಇದ್ದ ಬೋನಿನ ಬಾಗಿಲು ತೆರೆದು ಅರಣ್ಯ ‌ಸಿಬ್ಬಂದಿ ಹುಚ್ಚಾಟ! | Forest Staff Neglects To Open The Door Of The Leopard Cage

ಚಿಕ್ಕಮಗಳೂರು ಜಿಲ್ಲೆಯ ನಾರಾಯಣಪುರ ಗ್ರಾಮದಲ್ಲಿ ಬೋನಿನಲ್ಲಿ ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹತ್ತಿರದಿಂದ ನೋಡಲು ಬೋನಿನ ಬಾಗಿಲು ತೆರೆದು ಹುಚ್ಚಾಟ ನಡೆಸಿದ್ದಾರೆ. 

ಚಿಕ್ಕಮಗಳೂರು (ಆ.17): ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಹುಚ್ಚಾಟ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಯ ಈ ನಡೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ನಾರಾಯಣಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ, ಭಯ ಹುಟ್ಟಿಸಿತ್ತು. ಸ್ಥಳೀಯರು ಹೊಲ, ಗದ್ದೆ, ತೋಟಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಲು ಭಯ ಪಡುತ್ತಿದ್ದರು. ಹಾಗಾಗಿ ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಅವರ ಮನೆ ಬಳಿ ಬೋನಿಟ್ಟಿದ್ದರು.

ಶುಕ್ರವಾರ ರಾತ್ರಿ 12ರ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನು ಅರ್ಧ ತೆಗೆದು ಹುಚ್ಚಾಟ ಮೆರೆದಿದ್ದಾರೆ. ಚಿರತೆ ದಾಳಿಗೆ ಯತ್ನಿಸಿದಾಗ ತಕ್ಷಣ ಬಾಗಿಲು ಹಾಕಿದ್ದಾರೆ. ಅಧಿಕಾರಿಗಳ ಈ ಹುಚ್ಚಾಟದ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅಪಾಯಕಾರಿ ಪ್ರಾಣಿ ಜೊತೆ ಈ ರೀತಿ ಹುಚ್ಚಾಟ ಆಡುವ ಸಿಬ್ಬಂದಿ ವಿರುದ್ಧ ಸ್ಥಳೀಯರು ಕೂಡ ಅಸಮಾಧಾನ ಹೊರಹಾಕಿದ್ದಾರೆ.

Source link

Leave a Reply

Your email address will not be published. Required fields are marked *