Headlines

Dharmasthala Case Updates: ಧರ್ಮಸ್ಥಳ ಬಿಗ್ ಸಸ್ಪೆನ್ಸ್‌: ನಿನ್ನೆ ಶೋಧ ನಡೆಯಲಿಲ್ಲ, ಇಂದು ಏನಾಗುತ್ತೆ? | Dharmasthala Village Bone Excavation Suspense

Dharmasthala Case Updates: ಧರ್ಮಸ್ಥಳ ಬಿಗ್ ಸಸ್ಪೆನ್ಸ್‌: ನಿನ್ನೆ ಶೋಧ ನಡೆಯಲಿಲ್ಲ, ಇಂದು ಏನಾಗುತ್ತೆ? | Dharmasthala Village Bone Excavation Suspense



Dharmasthala Case Updates: ಧರ್ಮಸ್ಥಳ ಬಿಗ್ ಸಸ್ಪೆನ್ಸ್‌: ನಿನ್ನೆ ಶೋಧ ನಡೆಯಲಿಲ್ಲ, ಇಂದು ಏನಾಗುತ್ತೆ? | Dharmasthala Village Bone Excavation Suspense

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆಯಲ್ಲಿ ಹೊಸ ತಿರುವು. ಶೋಧ ಕಾರ್ಯಕ್ಕೆ ಬ್ರೇಕ್, ದೂರುದಾರರ ವಿಚಾರಣೆ, ಹೊಸ ದೂರು ದಾಖಲು. ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ?

ಬೆಳ್ತಂಗಡಿ (ಆ.17) ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದಾಗಿ ಆರೋಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಯಾವುದೇ ಶೋಧ, ಉತ್ಖನನ ನಡೆದಿಲ್ಲ. ಭಾನುವಾರ ತಂಡಕ್ಕೆ ರಜಾದಿನವಾಗಿದ್ದು ಶೋಧ ನಡೆಯುವುದಿಲ್ಲ. ಜೊತೆಗೆ ಸೋಮವಾರ ಉತ್ಖನನ ಕಾರ್ಯ ಮುಂದುವರಿಕೆ ಕುರಿತು ಎಸ್‌ಐಟಿ ಯಾವುದೇ ಮಾಹಿತಿ ನೀಡಿಲ್ಲ. ಇದು ಉತ್ಖನನಕ್ಕೆ ಬ್ರೇಕ್ ಬಿದ್ದಿದೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.ಈ ನಡುವೆ ಅಸ್ಥಿ ಪತ್ತೆಗಾಗಿ ಗುಂಡಿ ಅಗೆದ ಕಾರ್ಮಿಕರನ್ನು ಎಸ್‌ಐಟಿ ಅಧಿಕಾರಿಗಳು ಠಾಣೆಗೆ ಕರೆಸಿಕೊಂಡು ಅವರಿಂದ ದಾಖಲೆ ಸಂಗ್ರಹಿಸಿದ್ದಾರೆ. ಜೊತೆಗೆ ದೂರುದಾರನನ್ನೂ 4 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಸಂಗ್ರಹ:

ಅನಾಮಿಕ ದೂರುದಾರದ ಆರೋಪದ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಎಸ್ಐಟಿ ತಂಡ ಕಳೆದ 20 ದಿನಗಳಿಂದ ತನಿಖೆ, ಶೋಧ ಕಾರ್ಯ ನಡೆಸಿದ ಎಸ್‌ಐಟಿ, ಶೋಧ ಕಾರ್ಯದಲ್ಲಿ ಸಹಕರಿಸಿದ ಕಾರ್ಮಿಕರನ್ನು ಕೂಡ ಠಾಣೆಗೆ ಕರೆಸಿ ಅವರಿಂದ ಮಾಹಿತಿ ಸಂಗ್ರಹಿಸಿದೆ. ಜೊತೆಗೆ ದೂರುದಾರನನ್ನು ಶನಿವಾರ ಸುಮಾರು ನಾಲ್ಕು ತಾಸಿಗೂ ಅಧಿಕ ಕಾಲ ವಿಚಾರಣೆ ನಡೆಸಲಾಗಿದೆ. ಅನಾಮಿಕ ದೂರುದಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ತಲೆಬುರುಡೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದ್ದು ಕೆಲವೊಂದು ವಿಚಾರಗಳಿಗೆ ದೂರುದಾರ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾನೆ. ಇದರ ಜೊತೆಗೆ ಶೋಧ ಕಾರ್ಯ ನಡೆದ ಬೊಳಿಯಾರಿನ ಸ್ಥಳ ಸಂಖ್ಯೆ 15ಕ್ಕೆ ಸಂಬಂಧಪಟ್ಟಂತೆ ಇತರ ಕೆಲವರನ್ನು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಮತ್ತೊಂದು ದೂರು:

ಈ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ 13-15 ವರ್ಷದ ಬಾಲಕಿಯ ಶವವನ್ನು ಯಾವುದೇ ಮಹಜರು ನಡೆಸದೆ ವಿಲೇವಾರಿ ಮಾಡಲಾಗಿದೆ ಎಂದು ದೂರು ನೀಡಿದ್ದ ಇಚ್ಲಂಪಾಡಿಯ ಜಯಂತ ಟಿ. ಶನಿವಾರ ಮತ್ತೆ ಎಸ್ಐಟಿ ಠಾಣೆಗೆ ಆಗಮಿಸಿದ್ದರು. ಈ ಬಾರಿ, 15 ವರ್ಷದ ಹಿಂದೆ ಗ್ರಾಮದ ವಸತಿಗೃಹ ಒಂದರಲ್ಲಿ 35-40 ವರ್ಷದ ಮಹಿಳೆಯ ಕೊಲೆಯಾಗಿದ್ದು ಪ್ರಕರಣವನ್ನು ತರಾತುರಿಯಲ್ಲಿ ಮುಗಿಸಲಾಗಿದೆ .ಇದು ಕೊಲೆ ಮತ್ತು ಸಾಕ್ಷಿ ನಾಶದ ಪ್ರಕರಣವಾಗಿದೆ ಎಂದು ಆರೋಪಿಸಿದ್ದಾರೆ.

ಇದಲ್ಲದೆ ಇಲ್ಲಿ ಹಲವು ಮಹಿಳೆಯರ ಸಾವಿನ ಕುರಿತು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದೇನೆ. ಇಂತಹ ಪ್ರಕರಣಗಳನ್ನು ಮುಚ್ಚಿ ಹಾಕಿರುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಗೊಳ್ಳಬೇಕು ಎಂದು ತಿಳಿಸಿದ ಅವರು ಸೋಮವಾರ ಎಸ್‌ಐಟಿ ಅಧಿಕಾರಿಗಳು ಠಾಣೆಗೆ ಬರುವಂತೆ ಹೇಳಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.



Source link

Leave a Reply

Your email address will not be published. Required fields are marked *