Karnataka Rain ಹಲೆವೆಡೆ ಭಾರಿ ಮಳೆ, ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿ | Heavy Rain Alert In Karnataka Chikkamagaluru Declare School Holiday On Aug 18th

Karnataka Rain ಹಲೆವೆಡೆ ಭಾರಿ ಮಳೆ, ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿ | Heavy Rain Alert In Karnataka Chikkamagaluru Declare School Holiday On Aug 18th



Karnataka Rain ಹಲೆವೆಡೆ ಭಾರಿ ಮಳೆ, ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಿದ ಜಿಲ್ಲಾಧಿಕಾರಿ | Heavy Rain Alert In Karnataka Chikkamagaluru Declare School Holiday On Aug 18th

ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ, ಗುಡ್ಡ ಕುಸಿತಗಳ ಪರಿಣಾಮ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಬೆಂಗಳೂರು (ಆ.17) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.ಗುಡ್ಡ ಕುಸಿತಗಳು ಸಂಭವಿಸಿದ್ದು, ಹಲವು ಸಂಚಾರಗಳು ಅಸ್ತವ್ಯಸ್ತಗೊಂಡಿದೆ. ರೈಲು ಸಂಚಾರ, ರಸ್ತೆ ಸಂಚಾರಗಳೂ ಸ್ಥಗಿತಗೊಂಡ ಘಟನೆಗಳೂ ನಡೆದಿದೆ. ಭಾರಿ ಮಳೆಯಿಂದ 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯ ಸುರಿಯುತ್ತಿರುವ ಭಾರಿ ಮಳೆಯಿಂದ ನಾಳೆ (ಆಗಸ್ಟ್ 18) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಒಂದೆಡೆ ಕಾಫಿನಾಡನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ಇದರ ಜೊತಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, ಎನ್ ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ,ಖಾಂಡ್ಯ,ಆಲ್ದೂರು, ವಸ್ತಾರೆ, ಆವತಿ ಹೋಬಳಿಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶ

ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಮತ್ತು ನರಸಿಂಹರಾಜಪುರ ತಾಲ್ಲೂಕುಗಳಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ ಆಗಸ್ಟ್ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26, 30 ಹಾಗೂ 34ರ ಅಧಿಕಾರದಡಿ ರಜೆ ಘೋಷಿಸಲಾಗಿದೆ.

ಮಳೆ ಅಬ್ಬರಕ್ಕೆ ಕಾರುಗಳು ಜಲಾವೃತ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಹಲೆವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಶೃಂಗೇರಿಯಲ್ಲಿ ಭಾರಿ ಮಳೆಯಿಂದ ಕಾರುಗಳು ಜಲಾವೃತಗೊಂಡಿದೆ.ಶೃಂಗೇರಿ ದೇಗುಲದ ಪಾರ್ಕಿಂಗ್ ಇರುವ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿದೆ. ತುಂಗಾ ನದಿ ಅಬ್ಬರಕ್ಕೆ ತಗ್ಗು ಪ್ರದೇಶದ ಹಲವು ಗ್ರಾಮಗಳ ಗದ್ದೆ ತೋಟಗಳಿಗೆ ನೀರು ನುಗ್ಗಿದೆ.

ನಾಳೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್

ಭಾರಿ ಮಳೆಯಾಗುತ್ತಿರುವ ಕಾರಣ ಹಲವು ಜೆಲ್ಲಿಗಳಲ್ಲಿ ಮುನ್ನಚ್ಚೆರಿಕಾ ಕ್ರಮ ಜರುಗಿಸಲಾಗಿದೆ. ಇತ್ತ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಐದು ಜಿಲ್ಲಗಳಿಗೆ ನಾಳೆ (ಆ.18) ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕರ್ನಾಟಕ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಇದೇ ವೇಳೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು, ಯಾದಗಿರಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಧಾರವಾಡ, ದಾವಣೆಗೆರೆ, ವಿಜಯನಗರ, ತುಮೂಕುರ, ಕೋಲಾರ, ಚಿತ್ರದುರ್ಗ, ರಾಮನಗರ, ಮಂಡ್ಯ, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

 



Source link

Leave a Reply

Your email address will not be published. Required fields are marked *