ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ: ಡಿ.ಕೆ.ಶಿವಕುಮಾರ್‌ | Our Government Has Put 1 Lakh Crore For Poor Says Dk Shivakumar Gvd

ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ: ಡಿ.ಕೆ.ಶಿವಕುಮಾರ್‌ | Our Government Has Put 1 Lakh Crore For Poor Says Dk Shivakumar Gvd



ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ: ಡಿ.ಕೆ.ಶಿವಕುಮಾರ್‌ | Our Government Has Put 1 Lakh Crore For Poor Says Dk Shivakumar Gvd

ಕಾಂಗ್ರೆಸ್‌ ಸರ್ಕಾರದ ಯೋಜನೆಗಳಿಂದ ರಾಜ್ಯದ ಬಡವರ ಜೇಬಿಗೆ ಒಂದು ಲಕ್ಷ ಕೋಟಿ ರು. ಹಾಕುತ್ತಿದ್ದೇವೆ. ಆದರೆ ಜೆಡಿಎಸ್‌ ಹಾಗೂ ಬಿಜೆಪಿಯವರ ತ್ಯಾಗ, ಕೊಡುಗೆ ಏನಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ಬೆಂಗಳೂರು (ಆ.21): ಕಾಂಗ್ರೆಸ್‌ ಸರ್ಕಾರದ ಯೋಜನೆಗಳಿಂದ ರಾಜ್ಯದ ಬಡವರ ಜೇಬಿಗೆ ಒಂದು ಲಕ್ಷ ಕೋಟಿ ರು. ಹಾಕುತ್ತಿದ್ದೇವೆ. ಆದರೆ ಜೆಡಿಎಸ್‌ ಹಾಗೂ ಬಿಜೆಪಿಯವರ ತ್ಯಾಗ, ಕೊಡುಗೆ ಏನಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆ ಸೇರಿ ವಿವಿಧ ಜನಪರ ಯೋಜನೆಗಳಡಿ ಸರ್ಕಾರ ಬಡವರ ಜೇಬಿಗೆ ಒಂದು ಲಕ್ಷ ಕೋಟಿ ರು. ಹಾಕುತ್ತಿದೆ. ಆದರೆ ಜೆಡಿಎಸ್‌ನ ದೊಡ್ಡ ಗೌಡರು, ಮಕ್ಕಳು, ಮೊಮ್ಮಕ್ಕಳು ಯಾವ ತ್ಯಾಗ ಮಾಡಿದ್ದಾರೆ? ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರ ಕೊಡುಗೆ ಏನು? ಎಂದು ಟೀಕಿಸಿದರು.

ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ಕೈಗೆ ಅಸ್ತ್ರ ನೀಡಿದ್ದೇವೆ. ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ರೈತರಿಗೆ ಮೊದಲು ಉಚಿತ ವಿದ್ಯುತ್ ನೀಡಿದ್ದು ಬಂಗಾರಪ್ಪ. ನಾನು ಸಚಿವನಾದಾಗ 6 ತಾಸು ನೀಡುತ್ತಿದ್ದ ವಿದ್ಯುತ್‌ ಅನ್ನು 7 ತಾಸಿಗೆ ಏರಿಸಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್‌ ಅಧಿಕಾರದಲ್ಲಿದ್ದಾಗ ಯಾವುದೇ ಬಡವರ ಹೊಟ್ಟೆ ತುಂಬಿಸಿವೆಯೇ? ಜಮೀನು ಕೊಟ್ಟಿದೆಯೇ? ಎಂದು ತಿರುಗೇಟು ನೀಡಿದರು.

ಐತಿಹಾಸಿಕ ತೀರ್ಮಾನ: ನಮ್ಮ ಸರ್ಕಾರ ಸುದೀರ್ಘ ಚರ್ಚೆ ನಡೆಸಿ ಪರಿಶಿಷ್ಟ ಸಮುದಾಯದವರ ಒಳಮಿಸಲಾತಿಗೆ ಒಂದು ಸ್ವರೂಪ ನೀಡಿದೆ. ಪರಿಶಿಷ್ಟ ಜಾತಿಯ ಎಡಗೈ ಹಾಗೂ ಬಲಗೈನವರು ಸಮಾಧಾನವಾಗಿ ಇದನ್ನು ಒಪ್ಪಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನ ಐತಿಹಾಸಿಕವಾದದ್ದು. ಲಂಬಾಣಿ, ಬೋವಿ ಸಮುದಾಯದ ಜೊತೆಗೆ ಎಡ ಹಾಗೂ ಬಲಗೈ ನಾಯಕರನ್ನೂ ಕರೆಸಿ ಮಾತನಾಡಿದ್ದೇನೆ. ಎಲ್ಲರಿಗೂ ಸಮಾಧಾನ ತರುವ ತೀರ್ಮಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಅನಧಿಕೃತ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್: ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮಾಲೀಕರು ಕೂಡಲೇ ದುರಸ್ಥಿ ಮಾಡಿಕೊಳ್ಳಬೇಕು. ಇಂತಹ ಕಟ್ಟಡ ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದು, ಮಾಲೀಕರು ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಧರ್ಮರಾಯಸ್ವಾಮಿ ದೇವಾಲಯದ ಬಳಿಯ ತಿಗಳರಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ದುರ್ಬಲ ಕಟ್ಟಡಗಳಿಂದ ಹಾನಿ ಉಂಟಾಗುತ್ತಿದೆ. ಹಾಗಂತ ಕೂಡಲೇ ದುರ್ಬಲ ಕಟ್ಟಡಗಳನ್ನು ಕೆಡವಲು ಹೋಗುವುದಿಲ್ಲ. ಮಾಲೀಕರು ಕೂಡಲೇ ದುರಸ್ಥಿಗೆ ಒಳಪಡಿಸಬೇಕು. ಇಲ್ಲದಿದ್ದರೆ ಮಾತ್ರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹಲವು ಕಟ್ಟಡ ವಾಸಯೋಗ್ಯವಲ್ಲ: ಎರಡು, ಮೂರು ಮಹಡಿಗಳನ್ನು ಕಟ್ಟುವ ಕಡೆಗಳಲ್ಲಿ ಎಂಟತ್ತು ಮಹಡಿಗಳನ್ನು ನಿರ್ಮಾಣ ಮಾಡಲಾಗಿದೆ. ಹಲವಾರು ಕಟ್ಟಡಗಳು ವಾಸಕ್ಕೆ ಯೋಗ್ಯವಿಲ್ಲದಂತಾಗಿವೆ. ಇಂತಹ ಕಟ್ಟಡಗಳನ್ನು ಹೊಡೆದು ಹಾಕುವುದು ನಂತರದ ವಿಚಾರ. ಇದರ ಬಗ್ಗೆ ಮೊದಲು ಸಮೀಕ್ಷೆ ನಡೆಸಲಾಗುವುದು.‌ ಇದು ಒಂದೇ ದಿನಕ್ಕೆ ಮುಗಿಯುವ ಕೆಲಸವಲ್ಲ. ವರ್ಷಗಟ್ಟಲೆ ಹಿಡಿಯುತ್ತದೆ. ದೆಹಲಿ, ಮುಂಬೈನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ಒಳಗೆ ಬಂದು ನೋಡಿದಾಗ ನನಗೆ ಗಾಬರಿಯಾಯಿತು. ಇಂತಹ ಇಕ್ಕಟ್ಟಿನ ಜಾಗದಲ್ಲಿ ಬೆಂಕಿ ಅವಘಡ ನಡೆದರೆ ಜನ ಓಡಿ ಹೋಗುತ್ತಾರೆ. ಆಗ ಕಾಲ್ತುಳಿತ ಉಂಟಾಗಿಯೇ ಜನ ಸಾಯುತ್ತಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.



Source link

Leave a Reply

Your email address will not be published. Required fields are marked *