ಧರ್ಮಸ್ಥಳ ಪ್ರಕರಣ, ಬೆಳ್ತಂಗಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ | Dharmasthala Case Youtuber Sameer Md Appears Belthangady Police For Questioning

ಧರ್ಮಸ್ಥಳ ಪ್ರಕರಣ, ಬೆಳ್ತಂಗಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ | Dharmasthala Case Youtuber Sameer Md Appears Belthangady Police For Questioning



ಧರ್ಮಸ್ಥಳ ಪ್ರಕರಣ, ಬೆಳ್ತಂಗಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ | Dharmasthala Case Youtuber Sameer Md Appears Belthangady Police For Questioning

ಧರ್ಮಸ್ಥಳ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ (ಆ.24) ಧರ್ಮಸ್ಥಳ ವಿರುದ್ದ ಷಡ್ಯಂತ್ರ ನಡೆಸಿದ ಗ್ಯಾಂಗ್‌ನ ಒಬ್ಬೊಬ್ಬ ಸದಸ್ಯರ ಮುಖವಾಡ ಬಯಲಾಗುತ್ತಿದೆ. ಮುಸುಕುದಾರಿ ಚಿನ್ನಯ್ಯ ಅರೆಸ್ಟ್ ಆಗಿದ್ದಾನೆ. ಇತ್ತ ಧರ್ಮಸ್ಥಳ ವಿರುದ್ಧ ಎಐ ವಿಡಿಯೋ ಮೂಲಕ ಸುಳ್ಳು ಕತೆಗಳನ್ನು ಹೇಳಿ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸಮೀರ್ ಎಂಡಿ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್ ಎಂಡಿಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ಕೋರ್ಟ್ ಸೂಚಿಸಿತ್ತು. ಹೀಗಾಗಿ ಇದೀಗ ಸಮೀರ್ ಎಂಡಿ ಇದೀಗ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ.

ವಕೀಲರ ಜೊತೆ ಠಾಣೆಗೆ ಆಗಮಿದ ಯೂಟ್ಯೂಬರ್

ಮೂವರು ವಕೀಲರ ಜೊತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಗಂಡಿ ಪೊಲೀಸರು ಸಮೀರ್ ಎಂಡಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಬಂಧನ ಭೀತಿಯಲ್ಲಿದ್ದ ಸಮೀರ್ ಎಂಡಿ ಮಂಗಳೂರು ಕೋರ್ಟ್ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ಇಂದು ಕೋರ್ಟ್ ನೀಡಿದ ಗಡುಗು ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ತನಿಖಾಧಿಕಾರಿ ನಾಗೇಶ್ ಕೆ ವಿಚಾರಣೆ

ತನಿಖಾಧಿಕಾರಿ ನಾಗೇಶ್ ಕೆ ವಿಚಾರಣೆ ನಡೆಸಲಿದ್ದಾರೆ. ಸಮೀರ್ ಎಂಡಿ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಮೂರು ಬಾರಿ ನೊಟೀಸ್ ಕೊಟ್ಟರೂ ಹಾಜರಾಗದೇ ತಪ್ಪಿಸಿಕೊಂಡಿದ್ದ ಸಮೀರ್, ಇದೀಗ ಬಂಧನ ತಪ್ಪಿಸಿಕೊಳ್ಳಲು ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ.

ಕೆಲ ದಾಖಲೆ ಪತ್ರಗಳ ಜೊತೆ ಆಗಮಿಸಿದ ಸಮೀರ್

ಕೆಲ ದಾಖಲೆ ಪತ್ರಗಳನ್ನು ಹಿಡಿದು ಸಮೀರ್ ಎಂಡಿ ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ಸಮೀರ್ ಎಂಡಿ ನಿರೀಕ್ಷಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದ. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯಲಿದೆ.

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ದಾಖಲು

ಧರ್ಮಸ್ಥಳ ಪೊಲೀಸ್ ಅಧಿಕಾರಿ ಸ್ವಯಂಪ್ರೇರಿತವಾಗಿ ಸಮೀರ್ ಎಂಡಿ ವಿರುದ್ದ ದೂರು ದಾಖಲಿಸಿದ್ದಾರೆ. ತನಿಖೆಯ ಹಾದಿ ದಿಕ್ಕು ತಪ್ಪಿಸುವ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಜನರನ್ನು ಪ್ರಚೋದಿಸುವ ರೀತಿಯ ಮಾತುಗಳು, ಸುಳ್ಳು ಆರೋಪಗಳು, ಎಐ ನಕಲಿ ವಿಡಿಯೋಗಳನ್ನು ಸೃಷ್ಟಿಸಿದ ಆರೋಪ ಹೊರಿಸಿ ದೂರು ದಾಖಲಾಗಿತ್ತು.

 



Source link

Leave a Reply

Your email address will not be published. Required fields are marked *