Headlines

ಯಾದಗಿರಿಯಲ್ಲಿ ಆಘಾತಕಾರಿ ಘಟನೆ: ವಸತಿ ಶಾಲೆಯ ಶೌಚಾಲಯದಲ್ಲೇ ಒಂಭತ್ತನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ!! | Student Childbirth In School Toilet At Yadgiri Residential School

ಶಹಾಪುರದ ವಸತಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಹೆರಿಗೆಯಾದ ಘಟನೆ ನಡೆದಿದೆ. ಈ ಘಟನೆ ಶಾಲಾ ಆಡಳಿತದ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಯಾದಗಿರಿ (ಆ.28): ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯೊಂದರ ಶೌಚಾಲಯದಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಹೆರಿಗೆ ಮಾಡಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯು ಶಾಲಾ ಆಡಳಿತದ ಗಂಭೀರ ನಿರ್ಲಕ್ಷ್ಯವನ್ನು ಬಯಲಿಗೆಳೆದಿದ್ದು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಪ್ರಕರಣ ಸಂಬಂಧ ಸುವರ್ಣ ನ್ಯೂಸ್‌ಗೆ ಮಾಹಿತಿ ನೀಡಿದ್ದು, ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಆಘಾತಕಾರಿ ಘಟನೆಯು ವಸತಿ ಶಾಲೆಯ ಮೇಲ್ವಿಚಾರಕರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ.

ಈ ಘಟನೆಯಿಂದ ವಿದ್ಯಾರ್ಥಿನಿಯ ಗೌಪ್ಯತೆ ಮತ್ತು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಶಾಲಾ ಆಡಳಿತದ ವೈಫಲ್ಯವು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಾಳಜಿಯ ಕೊರತೆಯ ಬಗ್ಗೆ ಪ್ರಶ್ನೆಗಳೆದ್ದಿವೆ.

ಆಯೋಗವು ವಿದ್ಯಾರ್ಥಿನಿಗೆ ಅಗತ್ಯ ವೈದ್ಯಕೀಯ ಮತ್ತು ಮಾನಸಿಕ ಬೆಂಬಲವನ್ನು ಒದಗಿಸಲು ಕ್ರಮ ಕೈಗೊಂಡಿದೆ. ಜೊತೆಗೆ, ರಾಜ್ಯದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಒತ್ತಾಯಿಸಿದೆ.

Source link

Leave a Reply

Your email address will not be published. Required fields are marked *