‘ತಾಕತ್ ಇದ್ರೆ ಅಜಾನ್ ಬ್ಯಾನ್ ಮಾಡಿ..’ ಡಿಜೆ ಅನುಮತಿ ಕೋರಿ ಪ್ರತಿಭಟನೆ, ರೇಣುಕಾಚಾರ್ಯ ವಿರುದ್ಧ FIR | Mp Renukacharya Faces Fir In Davanagere Over Dj Ban Protest Provocative Remarks

‘ತಾಕತ್ ಇದ್ರೆ ಅಜಾನ್ ಬ್ಯಾನ್ ಮಾಡಿ..’ ಡಿಜೆ ಅನುಮತಿ ಕೋರಿ ಪ್ರತಿಭಟನೆ, ರೇಣುಕಾಚಾರ್ಯ ವಿರುದ್ಧ FIR | Mp Renukacharya Faces Fir In Davanagere Over Dj Ban Protest Provocative Remarks



‘ತಾಕತ್ ಇದ್ರೆ ಅಜಾನ್ ಬ್ಯಾನ್ ಮಾಡಿ..’ ಡಿಜೆ ಅನುಮತಿ ಕೋರಿ ಪ್ರತಿಭಟನೆ, ರೇಣುಕಾಚಾರ್ಯ ವಿರುದ್ಧ FIR | Mp Renukacharya Faces Fir In Davanagere Over Dj Ban Protest Provocative Remarks

ಗಣೇಶೋತ್ಸವದಲ್ಲಿ ಡಿಜೆ ಸಂಗೀತ ನಿಷೇಧ ವಿರೋಧಿಸಿ ಪ್ರತಿಭಟನೆ ಹಾಗೂ ಅನ್ಯ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ದಾವಣಗೆರೆಯಲ್ಲಿ ಎಫ್‌ಐಆರ್ ದಾಖಲು.

ದಾವಣಗೆರೆ (ಆ.30): ಗಣೇಶೋತ್ಸವದ ವೇಳೆ ಡಿಜೆ ಸಂಗೀತಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಹಾಗೂ ಅನ್ಯ ಧರ್ಮದ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಗಣೇಶೋತ್ಸವ ಡಿಜೆ ನಿಷೇಧ ವಿರುದ್ಧ ಪ್ರತಿಭಟನೆ

ದಾವಣಗೆರೆ ಜಿಲ್ಲಾಡಳಿತವು ಗಣೇಶೋತ್ಸವದ ಸಂದರ್ಭದಲ್ಲಿ ಡಿಜೆ ಸಂಗೀತಕ್ಕೆ ನಿಷೇಧ ಹೇರಿದ ಆದೇಶವನ್ನು ವಿರೋಧಿಸಿ, ಆಗಸ್ಟ್ 23ರಂದು ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ದಾವಣಗೆರೆಯ ಹಳೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಜಯದೇವ ವೃತ್ತದಲ್ಲಿ ಯುವಕರನ್ನು ಪ್ರಚೋದಿಸಿ ಪ್ರತಿಭಟನೆ ನಡೆಸಿದ ಆರೋಪ ರೇಣುಕಾಚಾರ್ಯ ಅವರ ಮೇಲೆ ಕೇಳಿಬಂದಿದೆ.

ಇದನ್ನೂ ಓದಿ: ಚುಂಚಿಫಾಲ್ಸ್‌ನಲ್ಲಿ ಪ್ರವಾಸಿಗರಿಗೆ ಕಿರುಕುಳ: ಪ್ರವೇಶಕ್ಕೆ 100 ರಿಂದ 500 ವಸೂಲಿ, ವಿಡಿಯೋ ವೈರಲ್

ರೇಣುಕಾಚಾರ್ಯ ಹೇಳಿದ್ದೇನು?

ಆಗಸ್ಟ್ 28ರಂದು ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರೇಣುಕಾಚಾರ್ಯ, ‘ಮೈಕ್‌ನಲ್ಲಿ ಆಜಾನ್ ಕೂಗುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ತಾಕತ್ ಇದ್ದರೆ ಆಜಾನ್ ಕೂಗುವುದನ್ನು ನಿರ್ಬಂಧಿಸಿ, ರಸ್ತೆ ಬಂದ್ ಮಾಡಿ ನಮಾಜ್ ಮಾಡುವುದನ್ನು ತಡೆಯಿರಿ’ ಪೊಲೀಸರನ್ನುದ್ದೇಶಿಸಿ ಕಿಡಿಕಾರಿದ್ದರು. ಈ ಹೇಳಿಕೆಯು ಅನ್ಯ ಧರ್ಮದ ಭಾವನೆಗಳಿಗೆ ಧಕ್ಕೆ ತಂದು ಸಾಮಾಜಿಕ ಸಾಮರಸ್ಯಕ್ಕೆ ಭಂಗ ತರುವಂತಹ ಪ್ರಚೋದನಾತ್ಮಕ ಸ್ವರೂಪದ್ದಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಡಿಜಿ-ಐಜಿಪಿಯಾಗಿ ಡಾ.ಸಲೀಂ ಮುಂದುವರಿಕೆ ಸಾಧ್ಯತೆ?

ಯಾವ್ಯಾವ ಸೆಕ್ಷನ್?

ಈ ಆರೋಪಗಳ ಆಧಾರದ ಮೇಲೆ, ರೇಣುಕಾಚಾರ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 126(2), 189(2), 190, 287, 353(2), ಮತ್ತು 49ರ ಅಡಿಯಲ್ಲಿ ಕೇಸು ದಾಖಲಾಗಿದೆ. ಈ ವಿಭಾಗಗಳು ಸಾರ್ವಜನಿಕ ಶಾಂತಿಗೆ ಭಂಗ ತರುವ ಕೃತ್ಯಗಳು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳು, ಮತ್ತು ಕಾನೂನು ಜಾರಿಗೊಳಿಸುವ ಸಿಬ್ಬಂದಿಗೆ ಅಡ್ಡಿಪಡಿಸುವ ಕೃತ್ಯಗಳಿಗೆ ಸಂಬಂಧಿಸಿವೆ.

ಈ ಘಟನೆಯಿಂದ ರಾಜ್ಯದಲ್ಲಿ ಧಾರ್ಮಿಕ ಸಾಮರಸ್ಯ ಮತ್ತು ಸಾರ್ವಜನಿಕ ಶಾಂತಿಯ ಬಗ್ಗೆ ಚರ್ಚೆ ತೀವ್ರಗೊಂಡಿದೆ. ರೇಣುಕಾಚಾರ್ಯ ಈ ಆರೋಪಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಮತ್ತು ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದು ಎಲ್ಲರ ಗಮನ ಸೆಳೆದಿದೆ.



Source link

Leave a Reply

Your email address will not be published. Required fields are marked *