88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ


ಬಳ್ಳಾರಿ, ಜೂನ್​ 29: ಡಿಸೆಂಬರ್​ನಲ್ಲಿ ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada Sahitya Sammelana) ಸರ್ವಾಧ್ಯಕ್ಷರಾಗಿ ಬೂಕರ್​ ಪ್ರಶಸ್ತಿಗೆ (Booker Award) ಭಾಜನರಾಗಿದ್ದ ಬಾನು ಮುಷ್ತಾಕ್ (Banu Mushtaq)​ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್​ನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲ ಪದಾಧಿಕಾರಿಗಳ ಸರ್ವಾನುಮತದಿಂದ ಬಾನು ಮುಷ್ತಾಕ್ ಹೆಸರನ್ನು ಅಂತಿಮಗೊಳಿಸಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿದ, ಪ್ರತಿಷ್ಠಿತ ಬೂಕರ್​ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್​ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೆ ಈಗ ಕೋಟಿ ಕೋಟಿ ಹಂಚಿಕೆ; 1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ಎಷ್ಟು ಗೊತ್ತಾ?

ಇದನ್ನೂ ಓದಿ

ಇದರೊಂದಿಗೆ ಎದೆಯ ಹಣತೆ ಕೃತಿಯನ್ನು ಅನುವಾದ ಮಾಡಿದ ದೀಪಾ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.

ಸಾಹಿತ್ಯ ಪರಿಷತ್​ನ ಕಾರ್ಯಕಾರಿ ಸಮಿತಿಯು ಲೇಖಕಿ ಬಾನು ಮುಷ್ತಾಕ್​ ಅವರನ್ನು ಸರ್ವಾನುಮತದಿಂದ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಈ ಆಯ್ಕೆಯನ್ನು ಸಾಹಿತಿ ಬಾನು ಮುಷ್ತಾಕ್ ಅವರು ಅತ್ಯಂತ ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On – 9:11 pm, Sun, 29 June 25



Source link

Leave a Reply

Your email address will not be published. Required fields are marked *