ತುಮಕೂರು, ಜೂನ್ 29: ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕ್ಯಾಂಟರ್ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ನವರು ಎಂದು ತಿಳಿದುಬಂದಿದೆ. ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಣಿಗಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಆಗುತ್ತಿದೆ…