Headlines

Karnataka Rains: ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಶುರುವಾಗುತ್ತೆ ಮಳೆ

Karnataka Rains: ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಶುರುವಾಗುತ್ತೆ ಮಳೆ


ಬೆಂಗಳೂರು, ಸೆಪ್ಟೆಂಬರ್ 09: ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ (ಮಳೆ) ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ.

ಮತ್ತಷ್ಟು: ಕರ್ನಾಟಕ ಮಳೆ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ. 11 ರಿಂದ ಭಾರಿ, ಯೆಲ್ಲೋ

ಬೆಂಗಳೂರಿನಲ್ಲಿ ಬಿಸಿಲ ವಾತಾವರಣವಿದೆ, ಎಚ್​​ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್ಪೋರ್ಟ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *