Headlines

Bengaluru Girl lovefail incident: ಪ್ರೇಮವೈಫಲ್ಯದಿಂದ ಮನನೊಂದು ನೇಣಿಗೆ ಕೊರಳೊಡ್ಡಿದ ಯುವತಿ | Bengaluru Girl Lost Her Life For Love Failed

ರಾಜಾಜಿನಗರದ ಗಾಯತ್ರಿ ನಗರದಲ್ಲಿ ಪ್ರೇಮ ವೈಫಲ್ಯದಿಂದ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಐದು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ ಮದುವೆಯ ವಿಚಾರವನ್ನು ಪದೇ ಪದೇ ಮುಂದೂಡುತ್ತಿದ್ದರಿಂದ ಮನನೊಂದು ಈ ನಿರ್ಧಾರಕ್ಕೆ ಬಂದಿದ್ದಾಳೆ ಎನ್ನಲಾಗಿದೆ.

ಬೆಂಗಳೂರು (ಸೆ.9): ಪ್ರೇಮವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾದ ಘಟನೆ ರಾಜಾಜಿನಗರದ ಗಾಯತ್ರಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಲತಾ(25) ನೇಣುಬಿಗಿದುಕೊಂಡ ಯುವತಿ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದವಳು ಮತ್ತು ಮಂಡ್ಯ ಜಿಲ್ಲೆಯ ಮೂಲದ ರಂಜಿತ್ ಎಂಬ ಯುವಕನನ್ನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದಳು. ರಂಜಿತ್ ಎಲೆಕ್ಟ್ರೀಷನ್ ಆಗಿ ಕೆಲಸ ಮಾಡುತ್ತಿದ್ದ. ಇಬ್ಬರ ಕುಟುಂಬಗಳೂ ಮದುವೆಗೆ ಒಪ್ಪಿಗೆ ಸೂಚಿಸಿದ್ದರೂ, ರಂಜಿತ್ ಮದುವೆಯ ವಿಚಾರವನ್ನು ಪದೇಪದೇ ಮುಂದೂಡುತ್ತಿದ್ದನು. ಇದೇ ಕಾರಣಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ನಿನ್ನೆ ರಾತ್ರಿಯೂ ಇದೇ ವಿಷಯಕ್ಕೆ ಸಂಬಂಧಿಸಿ ಲತಾ ಮತ್ತು ರಂಜಿತ್ ನಡುವೆ ತೀವ್ರ ಜಗಳವಾಗಿತ್ತು. ಇದರಿಂದ ಮನನೊಂದ ಲತಾ, ಇಂದು ಬೆಳಿಗ್ಗೆ ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾಳೆ.

ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸುಬ್ರಮಣ್ಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರೇಮ ವೈಫಲ್ಯದಿಂದ ಲತಾ ಈ ನಿರ್ಧಾರಕ್ಕೆ ಬಂದಿದ್ದಾಳೆ ಎಂಬುದು ಪ್ರಾಥಮಿಕ ಮಾಹಿತಿಯಾಗಿದೆ. ಅದ್ಯಾಗೂ ಘಟನೆಯ ಸತ್ಯಾಸತ್ಯತೆ ತನಿಖೆಯ ನಂತರ ಬಹಿರಂಗವಾಗಲಿವೆ.

Source link

Leave a Reply

Your email address will not be published. Required fields are marked *