Headlines

ಭಾರತ-ಪಾಕ್ ಕ್ರಿಕೆಟ್ ಪಂದ್ಯಕ್ಕೆ ಯತ್ನಾಳ್ ತೀವ್ರ ವಿರೋಧ; ‘ನಾನು ಮುಸ್ಲಿಂಗೆ ಕನ್ವರ್ಟ್ ಆಗಿದ್ದೇನೆ ಅಂದ್ಕೊಳ್ಳಿ..’ ಎಂದ ಸಿಎಂಗೂ ಟಾಂಗ್! | Vijayapura Mla Yatnal Opposes India Pakistan Cricket Match Slams Siddaramaiah

ಏಷ್ಯಾ ಕಪ್‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧಿಸಿದ್ದಾರೆ. ಪಾಕಿಸ್ತಾನದ ಭಯೋತ್ಪಾದನೆ ಮತ್ತು ಆಕ್ರಮಿತ ಕಾಶ್ಮೀರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ 

ವಿಜಯಪುರ (ಸೆ.14): ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಾಮೆಂಟ್‌ನಲ್ಲಿ ಇಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಮುಖಾಮುಖಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಿರೋಧ ವ್ಯಕ್ತಪಡಿಸಿದರು. 

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನವು ಭಾರತದ ವಿರುದ್ಧ ನಿರಂತರ ಭಯೋತ್ಪಾದನೆಯಲ್ಲಿ ತೊಡಗಿದೆ. ಅವರು ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಮತ್ತು ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡುವವರೆಗೆ ಭಾರತವು ಪಾಕಿಸ್ತಾನದೊಂದಿಗೆ ಕ್ರಿಕೆಟ್, ಫುಟ್‌ಬಾಲ್ ಸೇರಿದಂತೆ ಯಾವುದೇ ಕ್ರೀಡೆಯನ್ನು ಆಡಬಾರದು. ಗುಂಡಿಗೆ ಗುಂಡು ಕೊಡುವ ಕೆಲಸವೇ ಆಗಬೇಕು. ಜಗತ್ತಿನ ಯಾವುದೇ ಒತ್ತಡಕ್ಕೂ ಮಣಿಯಬಾರದು ಎಂದು ಬಿಸಿಸಿಐ ನಿರ್ಧಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಇದನ್ನೂ ಓದಿ: ‘ದೇಶಕ್ಕಿಂತ ಕ್ರಿಕೆಟ್ ಮುಖ್ಯವಾಯ್ತಾ?..’ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಸಿಲಿಕಾನ್ ಸಿಟಿ ಮಂದಿ ತೀವ್ರ ವಿರೋಧ!

ಸಿದ್ದರಾಮಯ್ಯಗೆ ಯತ್ನಾಳ್ ಟಾಂಗ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ನಾನು ಮುಸ್ಲಿಂ ಕನ್ವರ್ಟ್ ಆಗಿದ್ದೇನೆ ಎಂದುಕೊಳ್ಳಿ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ್, ಸಿದ್ದರಾಮಯ್ಯ ಅವರಿಗೆ ಮುಸ್ಲಿಮರಾಗಲು ಮೊದಲೇ ಹೇಳಿದ್ದೇವೆ. ಅವರು ಆಗಲಿ, ಜನರು 2028ರ ಚುನಾವಣೆಯಲ್ಲಿ ಅವರಿಗೆ ಬುದ್ಧಿ ಕಲಿಸುತ್ತಾರೆ. ಈಗ ಆಗಿದ್ದೇನೆ ಅಂತಾ ಹೇಳಿದ್ದಾರಲ್ಲ ಒಳ್ಳೆಯದು. ಅವರು ಮುಸ್ಲಿಮರದಷ್ಟೇ ಓಟು ತೆಗೆದುಕೊಳ್ಳಲಿ ಹಿಂದೂಗಳದ್ದು ಅವರಿಗೇಕೆ ಬೇಕು ಎಂದು ಟಾಂಗ್ ನೀಡಿದರು.

Source link

Leave a Reply

Your email address will not be published. Required fields are marked *