ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ನಿಯಮಗಳಿಗೆ ಸುಪ್ರೀಂಕೋರ್ಟ್ ತಡೆ | Supreme Court Doubts Some Provisions Of Central Governments Waqf Amendment Act

ಕೇಂದ್ರ ಸರ್ಕಾರದ ಮಹತ್ವದ ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಯಮಗಳಿಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಹೀಗಾಗಿ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಈ ಕಾಯ್ದೆಯ ಕೆಲ ನಿಬಂಧನೆಗಳನ್ನು ಸ್ಥಗಿತಗೊಳಿಸಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಯಮಗಳಿಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು ತಡೆ ಹೇರಿದೆ. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ವಕ್ಪ್‌ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ನಡೆದಿತ್ತು. ಈ ಪ್ರಕರಣಗಳ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದರಲ್ಲಿರುವ ಕೆಲ ವಿಚಾರಗಳು ನಿರಂಕುಶ ಅಧಿಕಾರಕ್ಕೆ ಕಾರಣವಾಗುತ್ತವೆ ಎಂದು ಹೇಳಿ ಆಕ್ಷೇಪ ವ್ಯಕ್ತಪಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು, ಇಡೀ ಶಾಸನವನ್ನು ತಡೆಹಿಡಿಯಲು ಯಾವುದೇ ಪ್ರಕರಣ ಮಾಡಲಾಗಿಲ್ಲ, ಆದರೆ ಇದರ ಕೆಲ ವಿಭಾಗಗಳಿಗೆ ಸ್ವಲ್ಪ ರಕ್ಷಣೆ ಬೇಕು ಎಂದು ಹೇಳಿದರು. ಹೀಗಾಗಿ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳು ಇತ್ಯರ್ಥವಾಗುವವರೆಗೆ ಈ ಕಾಯ್ದೆಯ ಕೆಲ ನಿಬಂಧನೆಗಳನ್ನು ಸ್ಥಗಿತಗೊಳಿಸಲಾಗಿದೆ.

Source link

Leave a Reply

Your email address will not be published. Required fields are marked *