Headlines

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ: ಉತ್ತಪ್ಪ, ಯುವಿ, ಸೋನು ಸೂದ್‌ಗೆ ಇಡಿ ಸಮನ್ಸ್‌: ಭೂವಂಚನೆ ಕೇಸಲ್ಲಿ ಯೂಸುಫ್ ಪಠಾಣ್ | 1xbet Online Betting App Ed Summons Robin Uthappa Yuvraj Singh Sonu Sood

1XBet ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಕ್ರಿಕೆಟಿರ್‌ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಮತ್ತೊಂದೆಡೆ, ಸರ್ಕಾರಿ ಜಾಗ ಅತಿಕ್ರಮಣ ಪ್ರಕರಣದಲ್ಲಿ ಕ್ರಿಕೆಟಿಗ ಯೂಸುಫ್ ಪಠಾಣ್‌ಗೆ ಜಾಗ ತೆರವಿಗೆ ಗುಜರಾತ್ ಹೈಕೋರ್ಟ್ ಆದೇಶಿಸಿದೆ.

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ: ಉತ್ತಪ್ಪ, ಯುವಿ, ಸೋನು ಸೂದ್‌ಗೆ ಇ.ಡಿ. ಸಮನ್ಸ್‌

ನವದೆಹಲಿ: 1ಎಕ್ಸ್‌ ಬೆಟ್‌ ಆನ್ಲೈನ್‌ ಬೆಟ್ಟಿಂಗ್‌ ಆ್ಯಪ್‌ ಪರ ಪ್ರಚಾರ ಮಾಡಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕನ್ನಡಿಗ ಕ್ರಿಕೆಟಿಗ ರಾಬಿನ್‌ ಉತ್ತಪ್ಪ, ಯುವರಾಜ್‌ ಸಿಂಗ್‌ ಮತ್ತು ನಟ ಸೋನು ಸೂದ್‌ ಅವರಿಗೆ ಸಮನ್ಸ್‌ ನೀಡಿದೆ. ಸೆ.22ರಂದು ರಾಬಿನ್‌ ಉತ್ತಪ್ಪ, ಸೆ.23ರಂದು ಯುವರಾಜ್‌ ಸಿಂಗ್‌ ಮತ್ತು ಸೆ.24ರಂದು ಸೋನು ಸೂದ್‌ಗೆ ವಿಚಾರಣೆಗೆ ಬರುವಂತೆ ನೋಟಿಸ್‌ ನೀಡಿದೆ. ಇದೇ ಪ್ರಕರಣದಲ್ಲಿ ಮಂಗಳವಾರ ನಟಿ ಊರ್ವಶಿ ರೌಟೇಲಾ ಅವರನ್ನು ವಿಚಾರಣೆ ನಡೆಸಿದ ಇ.ಡಿ., ಕಳೆದ ಬಾರಿ ಕ್ರಿಕೆಟಿಗ ಸುರೇಶ್ ರೈನಾ, ಶಿಖರ್‌ ಧವನ್‌, ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಅವರನ್ನು ವಿಚಾರಣೆ ನಡೆಸಿತ್ತು. ಬೆಟ್ಟಿಂಗ್‌ ಆ್ಯಪ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಡಿ ಇ.ಡಿ. ತನಿಖೆ ನಡೆಸುತ್ತಿದೆ.

ಮಾಜಿ ಕ್ರಿಕೆಟಿಗ, ಸಂಸದ ಪಠಾಣ್‌ ಭೂ ವಂಚಕ: ಕೋರ್ಟ್‌ ಘೋಷಣೆ

ಅಹಮದಾಬಾದ್‌: ಸೆಲೆಬ್ರಿಟಿಗಳಿಗೆ ಪ್ರತ್ಯೇಕ ಕಾನೂನೇನೂ ಇಲ್ಲ ಎಂದು ಮಾಜಿ ಕ್ರಿಕೆಟಿಗ, ತೃಣಮೂಲ ಕಾಂಗ್ರೆಸ್‌ ಸಂಸದ ಯೂಸುಫ್‌ ಪಠಾಣ್‌ ಅವರು ತರಾಟೆಗೆ ತೆಗೆದುಕೊಂಡಿರುವ ಗುಜರಾತ್‌ ಹೈಕೋರ್ಟ್‌, ಅತಿಕ್ರಮಿಸಿರುವ ಸರ್ಕಾರಿ ಜಾಗ ತೆರವುಗೊಳಿಸುವಂತೆ ಸೂಚಿಸಿದೆ. ವಡೋದರಾದ ತಂಡಲ್ಜಾ ಪ್ರದೇಶದಲ್ಲಿರುವ ಬಂಗಲೆಯ ಪಕ್ಕದಲ್ಲಿರುವ ಜಮೀನನ್ನು ಅತಿಕ್ರಮಿಸಿದ್ದ ಪಠಾಣ್‌ ಅದನ್ನು ತಮಗೆ ನೀಡುವಂತೆ ಪಾಲಿಕೆಗೆ ಸೂಚಿಸಿದ್ದರು. ಆದರೆ ಪಾಲಿಕೆ ನಿರಾಕರಿಸಿತ್ತು. ಬಳಿಕ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿ, ಅದು ಪಠಾಣ್‌ಗೆ ಜಾಗ ತೆರವು ಮಾಡುವಂತೆ ತಾಕೀತು ಮಾಡಿದೆ.

Source link

Leave a Reply

Your email address will not be published. Required fields are marked *